ಮುಂಬಯಿ : ವಿದೇಶೀ ಬಂಡವಾಳ ನಿರಂತರವಾಗಿ ಹರಿದು ಬರುತ್ತಿರುವುದು, ಸಾಂಸ್ಥಿಕ ತ್ತೈಮಾಸಿಕ ಫಲಿತಾಂಶಗಳು ಆಶಾದಾಯಕವಾಗಿರುವುದು, ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ಧನಾತ್ಮಕ ಸ್ಥಿತಿ ನೆಲೆಗೊಂಡಿರುವುದು – ಮುಂತಾದ ಹಲವು ಮುಖ್ಯಕಾರಣಗಳಿಂದಾಗಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 32,533.34 ಅಂಕಗಳ ಹೊಸ ಸಾರ್ವಕಾಲಿಕ ಮಟ್ಟವನ್ನು ತಲುಪುವ ಸಾಧನೆ ಮಾಡಿತು.
ಇದೇ ರೀತಿ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲೇ 10,068.40 ಅಂಕಗಳ ಹೊಸ ದಾಖಲೆಯ ಎತ್ತರವನ್ನು ತಲುಪಿದ ಸಾಧನೆ ಮಾಡಿತು.
ಬೆಳಗ್ಗೆ 10.20ರ ಹೊತ್ತಿಗೆ ಸೆನ್ಸೆಕ್ಸ್ 183.66 ಅಂಕಗಳ ಮುನ್ನಡೆಯೊಂದಿಗೆ 32,566.12 ಅಂಕಗಳ ಮಟ್ಟದಲ್ಲೂ, ನಿಫ್ಟಿ 61.40 ಅಂಕಗಳ ಮುನ್ನಡೆಯೊಂದಿಗೆ 10,082.10 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಎಸ್ ಬ್ಯಾಂಕ್, ಎಚ್ ಡಿ ಎಫ್ ಸಿ, ಮಾರುತಿ ಸುಜುಕಿ, ಐಸಿಐಸಿಐ ಬ್ಯಾಂಕ್, ಎಚ್ ಸಿ ಎಲ್ ಟೆಕ್ ಶೇರುಗಳು ಅತೀ ಹೆಚ್ಚು ಕ್ರಿಯಾಶೀಲವಾಗಿದ್ದವು.
ಟಾಪ್ ಗೇನರ್‌ಗಳಾಗಿ ಎಸ್ ಬ್ಯಾಂಕ್, ಎಚ್ ಡಿ ಎಫ್ ಸಿ, ಎಚ್‌ಸಿಎಲ್ ಟೆಕ್, ಈಶರ್ ಮೋಟರ್, ಗೇಲ್ ಶೇರುಗಳು ವಿಜೃಂಭಿಸಿದರು.
ಟಾಪ್ ಲೂಸರ್‌ಗಳಾಗಿ ಭಾರ್ತಿ ಏರ್‌ಟೆಲ್, ಸಿಪ್ಲಾ, ಟೆಕ್ ಮಹೀಂದ್ರ, ಸನ್ ಫಾರ್ಮಾ, ಹಿಂಡಾಲ್ಕೋ ಶೇರುಗಳು ನಿರಾಶೆ ಉಂಟುಮಾಡಿದವು.