ಮುಂಬಯಿ : ಮುಂಬಯಿ ಶೇರು ಪೇಟೆ 2018ರ ಮೊದಲ ದಿನ, ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 18 ಅಂಕಗಳ ನಷ್ಟಕ್ಕೆ ಗುರಿಯಾಯಿತಾದರೂ ಅನಂತರ ಚೇತರಿಕೆಯನ್ನು ಕಂಡು 10.40ರ ಹೊತ್ತಿಗೆ 36.71 ಅಂಕಗಳ ಏರಿಕೆಯನ್ನು ದಾಖಲಿಸಿ 34,093.54 ಅಂಕಗಳ ಮಟ್ಟವನ್ನು ತಲುಪುವಲ್ಲಿ ಸಫಲವಾಯಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 6.80 ಅಂಕಗಳ ಏರಿಕೆಯನ್ನು ದಾಖಲಿಸಿ 10,573.50 ಅಂಕಗಳ ಮಟ್ಟವನ್ನು ತಲುಪಿತು.
ಮಾರುತಿ ಸುಜುಕಿ, ಸನ್ ಫಾರ್ಮಾ, ಟಾಟಾ ಮೋಟರ್, ಎಸ್‌ಬಿಐ, ರಿಲಯನ್ಸ ಶೇರಗಳು ಇಂದಿನ ಆರಂಭಿಕ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ಗೇನರ್‌ಗಳಾಗಿ ಸನ್ ಫಾರ್ಮಾ, ಅರಬಿಂದೋ ಫಾರ್ಮಾ, ಐಟಿಸಿ, ಟಾಟಾ ಮೋಟರ್, ಸಿಪ್ಲಾ ಮುನ್ನಡೆ ಸಾಧಿಸಿದರೆ ಟಾಪ್ ಲೂಸರ್‌ಗಳಾಗಿ ಭಾರ್ತಿ ಇನ್‌ಫ್ರಾಟೆಲ್, ಐಡಿಯಾ ಸೆಲ್ಯುಲರ್, ಟಿಸಿಎಸ್, ಎಚ್‌ಯುಎಲ್, ವೇದಾಂತ ಶೇರುಗಳು ಹಿನ್ನಡೆಗೆ ಗುರಿಯಾದವು.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಬೆಳಗ್ಗೆ 2,510 ಶೇರುಗಳು ವಹಿವಾಟಿಗೆ ಒಳಪಟ್ಟವು; 1,791 ಶೇರುಗಳು ಮುನ್ನಡೆ ಸಾಧಿಸಿದವು; 623 ಶೇರುಗಳು ಹಿನ್ನಡೆಗೆ ಗುರಿಯಾದವು; 96 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.