ಮುಂಬಯಿ : ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ತೋರಿ ಬಂದು ದೃಢತೆಯನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 224 ಅಂಕಗಳ ಜಿಗಿತವನ್ನು ಸಾಧಿಸಿತು.
ರಾಷ್ಟೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 10,200 ಅಂಕಗಳ ಮನೋ ಪ್ರಾಬಲ್ಯದ ಮಟ್ಟವನ್ನು ಪುನರ್ ಸಂಪಾದಿಸಿತು.
ಆದರೆ 10.30ರ ಹೊತ್ತಿಗೆ ಸೆನ್ಸೆಕ್ಸ್ ತನ್ನ ಆರಂಭಿಕ ವಹಿವಾಟಿನ ಗಳಿಕೆಯ ಬಹುಪಾಲನ್ನು ಬಿಟ್ಟುಕೊಟ್ಟು 55.24 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 32,445.20 ಅಂಕಗಳ ಮಟ್ಟದಲ್ಲೂ , ನಿಫ್ಟಿ 28.70 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 10,175.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಕಳೆದ ಗುರುವಾರ ನಡೆದಿದ್ದ 2074ರ ಸಂವತ್ಸರದ ಮೊದಲ ದಿನದ ವಿಶೇಷ ಮುಹೂರ್ತದ ವಹಿವಾಟಿನಲ್ಲಿ ಸೆನ್ಸೆಕ್ಸ್ 194.39 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಟಾಪ್ ಗೇನರ್‌ಗಳಾಗಿ ಐಡಿಯಾ ಸೆಲ್ಯುಲರ್, ಅಂಬುಜಾ ಸಿಮೆಂಟ್ಸ್, ಅಲ್‌ಟ್ರಾ ಟೆಕ್ ಸಿಮೆಂಟ್, ಅದಾನಿ ಪೋರ್ಟ್ಸ್, ಎಚ್‌ಸಿಎಲ್ ಟೆಕ್ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ಲೂಸರ್‌ಗಳಾಗಿ ಭಾರ್ತಿ ಏರ್‌ಟೆಲ್, ಎಕ್ಸಿಸ್ ಬ್ಯಾಂಕ್, ಬಜಾಜ್ ಆಟೋ, ಈಶರ್ ಮೋಟರ್, ಎಚ್ ಡಿ ಎಫ್ ಸಿ ಶೇರುಗಳು ಹಿನ್ನಡೆ ಕಂಡವು.