ಮುಂಬಯಿ : ನಿರೀಕ್ಷೆಗೂ ಮೀರಿದ ಎಚ್ ಡಿ ಎಫ್ ಸಿ ಬ್ಯಾಂಕ್ ತ್ತೈಮಾಸಿಕ ಫಲಿತಾಂಶ, ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ಸ್ಥಿರತೆಯ ವಾತಾವರಣ, ಡಾಲರ್ ಎದುರು ಸುಧಾರಣೆ ಕಂಡ ರೂಪಾಯಿ, ವಹಿವಾಟುದಾರರು ಮತ್ತು ಹೂಡಿಕೆದಾರರಿಂದ ಮುಂಚೂಣಿ ಶೇರುಗಳ ಖರೀದಿ – ಇವೇ ಮೊದಲಾದ ಧನಾತ್ಮಕ ಕಾರಣಗಳಿಂದಾಗಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 321 ಅಂಕಗಳ ಜಿಗಿತವನ್ನು ದಾಖಲಿಸಿತು.
ಡಾಲರ್ ಎದುರು ರೂಪಾಯಿ ಇಂದು 8 ಪೈಸೆಗಳ ಚೇತರಿಕೆಯನ್ನು ಕಂಡು 73.24 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಯಿತು. ಬ್ರೆಂಟ್ ಕಚ್ಚಾ ತೈಲ ಬೆಲೆ ಶೇ.0.44ರ ಕುಸಿತವನ್ನು ಕಂಡು ಬ್ಯಾರೆಲ್‌ಗೆ 79.65 ಡಾಲರ್ ಗೆ ಇಳಿಯಿತು.
ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್ 847 ಅಂಕಗಳ ನಷ್ಟವನ್ನು ಅನುಭವಿಸಿತ್ತು. ಇಂದು ಬೆಳಗ್ಗೆ 10.50ರ ಹೊತ್ತಿಗೆ ಸೆನ್ಸೆಕ್ಸ್ 60.63 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 34,376.26 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 14.50 ಅಂಕಗಳ ಮುನ್ನಡೆಯನ್ನು ಕಾಯ್ದು ಕೊಂಡು 10,318.00 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ರಿಲಯನ್ಸ್, ಎಚ್ ಡಿ ಎಫ್ ಸಿ ಬ್ಯಾಂಕ್, ಎಸ್ ಬ್ಯಾಂಕ್, ಬಜಾಜ್ ಫಿನಾನ್ಸ್, ಐಸಿಐಸಿಐ ಬ್ಯಾಂಕ್ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ಗೇನರ್‌ಗಳು: ಇಂಡಿಯಾ ಬುಲ್ಸ್ ಹೌಸಿಂಗ್ ಫಿನಾನ್ಸ್, ಬಜಾಜ್ ಫಿನಾನ್ಸ್, ಐಸಿಐಸಿಐ ಬ್ಯಾಂಕ್, ಎಚ್ ಸಿ ಎಲ್ ಟೆಕ್, ಗೇಲ್ ; ಟಾಪ್ ಲೂಸರ್‌ಗಳು : ಬಿಪಿಸಿಎಲ್, ಅಲ್‌ಟ್ರಾ ಟೆಕ್ ಸಿಮೆಂಟ್, ಎಸ್ ಬ್ಯಾಂಕ್, ಐಓಸಿ, ಟೆಕ್ ಮಹೀಂದ್ರ.