ಮುಂಬಯಿ : ಕಂಪೆನಿಗಳ ತ್ತೈಮಾಸಿಕ ಫಲಿತಾಂಶಗಳು ಉತ್ತಮವಾಗಿರುವದು, ವಿದೇಶಿ ಬಂಡವಾಳ ನಿರಂತರವಾಗಿ ಹರಿದು ಬರುತ್ತಿರುವುದು ಮತ್ತು ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ಸ್ಥಿರತೆ ತೋರಿ ಬಂದಿರುವುದು ಇವೇ ಮೊದಲಾದ ಕಾರಣಗಳಿಗೆ ಮುಂಬಯಿ ಶೇರುಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 131 ಅಂಕಗಳ ಮುನ್ನಡೆಯನ್ನು ಸಾಧಿಸಿ ನಿರಂತರ ಮೂರನೇ ದಿನಕ್ಕೆ ತನ್ನ ಗೆಲುವಿನ ಓಟವನ್ನು ವಿಸ್ತರಿಸಿದೆ.
ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್ 489.24 ಅಂಕಗಳನ್ನು ಸಂಪಾದಿಸಿದೆ. ಇಂದು ಎಫ್ಎಂಸಿಜಿ, ಹೆಲ್ತ್ ಕೇರ್, ರಿಯಲ್ಟಿ ಮತ್ತು ಬ್ಯಾಂಕಿಂಗ್ ರಂಗದ ಶೇರುಗಳು ಉತ್ತಮ ಖರೀದಿ ಬೆಂಬಲವನ್ನು ಪಡೆದವು.
ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್ 122.60 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 35,382.89 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 28.20 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 10,845.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಎಸ್ ಬ್ಯಾಂಕ್, ಎಚ್ ಡಿ ಎಫ್ ಸಿ, ಭಾರ್ತಿ ಏರ್‌ಟೆಲ್, ಎಸ್ ಬಿ ಐ, ಐಸಿಐಸಿಐ ಬ್ಯಾಂಕ್ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಇಂದು ಬೆಳಗ್ಗೆ 2,537 ಶೇರುಗಳು ವ್ಯವಹಾರಕ್ಕೆ ಒಳಪಟ್ಟಿದ್ದವು; 1,370 ಶೇರುಗಳು ಮುನ್ನಡೆ ಕಂಡವು; 1,073 ಶೇರುಗಳು ಹಿನ್ನಡೆಗೆ ಗುರಿಯಾದವು; 94 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.