ಮುಂಬಯಿ : ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ತೋರಿ ಬಂದ ಹೊರತಾಗಿಯೂ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ವಹಿವಾಟನ್ನು 139.42 ಅಂಕಗಳ ಮುನ್ನಡೆಯೊಂದಿಗೆ 33,136.18 ಅಂಕಗಳ ಮಟ್ಟದಲ್ಲಿ ಆಶಾದಾಯಕವಾಗಿ ಕೊನೆಗೊಳಿಸಿತು.
ನಿನ್ನೆಯ ಮಂಗಳವಾರದ ವಹಿವಾಟನ್ನು 73.64 ಅಂಕಗಳ ಮುನ್ನಡೆಯೊಂದಿಗೆ ಕೊನೆಗೊಳಿಸಿದ್ದ ಸೆನ್ಸೆಕ್ಸ್ ಇಂದಿನ ಆರಂಭಿಕ ವಹಿವಾಟಿನಲ್ಲಿ 226.85 ಅಂಕಗಳ ಉತ್ತಮ ಏರಿಕೆಯನ್ನು ಸಾಧಿಸಿ 33,223.62 ಅಂಕಗಳ ಮಟ್ಟಕ್ಕೆ ಏರಿತ್ತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 30.90 ಅಂಕಗಳ ಮುನ್ನಡೆಯೊಂದಿಗೆ ಇಂದಿನ ವಹಿವಾಟನ್ನು 10,155.25 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ವಿದೇಶೀ ಹೂಡಿಕೆದಾರರು 334.16 ಕೋಟಿ ರೂ. ಮೌಲ್ಯದ ಶೇರುಗಳನ್ನು ಖರೀದಿಸಿದ್ದಾರೆ. ಇದೇ ವೇಳೆ ದೇಶೀಯ ಸಾಂಸ್ಥಿಕ ಹೂಡಿಕೆದಾರರು 731.17 ಕೋಟಿ ರೂ. ಮೌಲ್ಯದ ಶೇರುಗಳನ್ನು ಖರೀದಿಸಿದ್ದಾರೆ.
ಮುಂಬಯಿ ಶೇರು ಪೇಟೆಯಲ್ಲಿ ಂದು ಒಟ್ಟು 2,860 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು. ಈ ಪೈಕಿ 1,296 ಶೇರುಗಳು ಮುನ್ನಡೆ ಸಾಧಿಸಿದವು. 1,417 ಶೇರುಗಳು ಹಿನ್ನಡೆಗೆ ಗುರಿಯಾದವು; 157 ಕಂಪೆನಿಗಳ ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.