ಮುಂಬಯಿ : ಮೇ ತಿಂಗಳ ವಾಯಿದೆ ವಹಿವಾಟಿಗೆ ಭರ್ಜರಿ ಆರಂಭ ನೀಡಿರುವ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರದ ವಹಿವಾಟನ್ನು 256 ಅಂಕಗಳ ಜಿಗಿತದೊಂದಿಗೆ ಮೂರು ತಿಂಗಳ ಗರಿಷ್ಠ ಮಟ್ಟವಾಗಿ 34,969.70 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇಂದಿನ ವಹಿವಾಟಿನಲ್ಲಿ ಹಣಕಾಸು ಶೇರುಗಳಾದ ಎಕ್ಸಿಸ್ ಬ್ಯಾಂಕ್, ಎಸ್‌ಬಿಐ, ಐಸಿಐಸಿಐ ಬ್ಯಾಂಕ್ ಉತ್ತಮ ಖರೀದಿಯನ್ನು ಕಂಡು ಶೇ.9ರ ಏರಿಕೆಯನ್ನು ದಾಖಲಿಸಿದವು.
ದಕ್ಷಿಣ ಮತ್ತು ಉತ್ತರ ಕೊರಿಯ ನಡುವೆ ಫಲಿಸಿರುವ ಐತಿಹಾಸಿಕ ಶಾಂತಿ ಮಾತುಕತೆಯ ಪರಿಣಾಮವಾಗಿ ಜಾಗತಿಕ ಶೇರು ಮಾರುಕಟ್ಟೆಗಳಲ್ಲಿಂದು ಹೊಸ ಉತ್ಸಾಹ ತುಂಬಿತು.
ನಿನ್ನೆ ಗುರುವಾರ ಸೆನ್ಸೆಕ್ಸ್ 212.33 ಅಂಕಗಳ ಉತ್ತಮ ಏರಿಕೆಯನ್ನು ದಾಖಲಿಸಿತ್ತು. ಇಂದು ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 74.50 ಅಂಕಗಳ ಏರಿಕೆಯನ್ನು ದಾಖಲಿಸಿ 10,692.30 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿತು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,771 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 1,401 ಶೇರುಗಳು ಮುನ್ನಡೆ ಸಾಧಿಸಿದವು; 1,234 ಶೇರುಗಳು ಹಿನ್ನಡೆಗೆ ಗುರಿಯಾದವು; 136 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.