ಮುಂಬಯಿ : ಏಶ್ಯನ್ ಶೇರು ಪೇಟೆಗಳಲ್ಲಿ ಧನಾತ್ಮಕ ಸನ್ನಿವೇಶ ಕಂಡು ಬಂದ ಹೊರತಾಗಿಯೂ ಮುಂಬಯಿ ಶೇರು ಪೇಟೆ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಆಟೋ, ಮೆಟಲ್ ಮತ್ತು ಬ್ಯಾಂಕಿಂಗ್ ರಂಗದ ಶೇರುಗಳ ಬೇಕಾಬಿಟ್ಟಿ ಮಾರಾಟದ ಒತ್ತಡಕ್ಕೆ ಗುರಿಯಾಗಿ 180 ಅಂಕಗಳ ನಷ್ಟ ಅನುಭವಿಸಿತು.
ಕಳೆದ ಶುಕ್ರವಾರದ ವಹಿವಾಟಿನಲ್ಲಿ 169 ಅಂಕಗಳ ನಷ್ಟವನ್ನು ಕಂಡಿದ್ದ ಮುಂಬಯಿ ಶೇರು ಪೇಟೆ ಇಂದು ಸೋಮವಾರವೂ, ನಿರಂತರ ಎರಡನೇ ದಿನವಾಗಿ, ನಷ್ಟಕ್ಕೆ ಗುರಿಯಾಯಿತು.
ಬೆಳಗ್ಗೆ 11.00 ರ ಸುಮಾರಿಗೆ ಸೆನ್ಸೆಕ್ಸ್ 192.97 ಅಂಕಗಳ ನಷ್ಟದೊಂದಿಗೆ 35,832.57 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 65 ಅಂಕಗಳ ನಷ್ಟದೊಂದಿಗೆ 10,715.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಝೀ ಎಂಟರ್‌ಟೇನ್‌ಮೆಂಟ್, ಮಾರುತಿ ಸುಜುಕಿ, ಲಾರ್ಸನ್, ಎಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಶೇರುಗಳು ಇಂದು ಬೆಳಗ್ಗಿನ ವಹಿವಾಟಿನಲ್ಲಿ ಅತ್ಯಂತ ಸಕ್ರಿಯವಾಗಿದ್ದವು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 19 ಪೈಸೆಗಳ ಏರಿಕೆಯನ್ನು ದಾಖಲಿಸಿ 70.98 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.