ಮುಂಬಯಿ : ಕರ್ನಾಟಕದಲ್ಲಿನ ರಾಜಕೀಯ ಅನಿಶ್ಚಿತತೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಎಚ್ಚರಿಕೆಯ ನಡೆ ತೋರಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 59.51 ಅಂಕಗಳ ನಷ್ಟಕ್ಕೆ ಗುರಿಯಾಗಿ 35,089.61 ಅಂಕಗಳ ಮಟ್ಟಕ್ಕೆ ಜಾರಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 17.90 ಅಂಕಗಳ ನಷ್ಟದೊಂದಿಗೆ 10,664.80ಅಂಕಗಳ ಮಟ್ಟಕ್ಕೆ ಇಳಿದು ದಿನದ ವಹಿವಾಟನ್ನು ಆರಂಭಿಸಿತ್ತು.
ಆರಂಭಿಕ ವಹಿವಾಟಿನಲ್ಲಿ ಇಂದು 573 ಶೇರುಗಳು ಮುನ್ನಡೆ ಕಂಡವು; 587 ಶೇರುಗಳು ಹಿನ್ನಡೆಗೆ ಗುರಿಯಾದವು. ಎಚ್ ಡಿ ಎಫ್ ಸಿ ಬ್ಯಾಂಕ್, ಇನ್‌ಫೋಸಿಸ್, ಐಸಿಐಸಿಐ ಬ್ಯಾಂಕ್, ಲಾರ್ಸನ್, ಎಕ್ಸಿಸ್ ಬ್ಯಾ,ಕ್, ಐಓಸಿ, ಟಿಸಿಎಸ್ ಶೇರುಗಳು ಶೇ.1ರ ನಷಕ್ಕೆ ಗುರಿಯಾದವು.
ಬೆಳಗ್ಗೆ 11 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್ 103.88 ಅಂಕಗಳ ನಷ್ಟದೊಂದಿಗೆ 35,045.24 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 23.20 ಅಂಕಗಳ ನಷ್ಟದೊಂದಿಗೆ 10,659.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ರಿಲಯನ್ಸ್, ಸನ್ ಫಾರ್ಮಾ, ಎಚ್ ಡಿ ಎಫ್ ಸಿ ಬ್ಯಾಂಕ್, ಒಎನ್‌ಜಿಸಿ, ಐಸಿಐಸಿಐ ಬ್ಯಾಂಕ್ ಶೇರುಗಳು ಇಂದು ಬೆಳಗ್ಗಿನ ವಹಿವಾಟಿನಲ್ಲಿ ಹೆಚ್ಚು ಕ್ರಿಯಾಶೀಲವಾಗಿದ್ದವು.