Advertisement

ಲಾಭನಗದೀಕರಣದ ಶೇರು ಮಾರಾಟ: ಸೆನ್ಸೆಕ್ಸ್‌ 107 ಅಂಕ ನಷ್ಟ

04:18 PM Dec 04, 2018 | |

ಮುಂಬಯಿ : ಏಶ್ಯನ್‌ ಶೇರು ಪೇಟೆಗಳಲ್ಲಿ ಕಂಡು ಬಂದ ಮಂದಗತಿ, ತೈಲ ಬೆಲೆಯಲ್ಲಿನ ಏರುಗತಿ, ಡಾಲರ್‌ ಎದುರು ರೂಪಾಯಿ ದೌರ್ಬಲ್ಯ ಇವೇ ಮೊದಲಾದ ಕಾರಣಕ್ಕೆ ಇಂದು ಮಂಗಳವಾರ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ 106.69 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 36,134.31 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.

Advertisement

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 14.25 ಅಂಕಗಳ ನಷ್ಟದೊಂದಿಗೆ 10,869.50 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿತು. 

ಡಾಲರ್‌ ಎದುರು ರೂಪಾಯಿ ಇಂದಿನ ವಹಿವಾಟಿನಲ್ಲಿ 9 ಪೈಸೆ ಕುಸಿತವನ್ನು ಕಂಡು 70.55 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು   2,717 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,160 ಕಂಪೆನಿಗಳು ಮುನ್ನಡೆ ಸಾಧಿಸಿದವು;  1,412 ಕಂಪೆನಿಗಳು ಹಿನ್ನಡೆಗೆ ಗುರಿಯಾದವು;  145 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ.  

Advertisement

Udayavani is now on Telegram. Click here to join our channel and stay updated with the latest news.

Next