Advertisement

ಮುಂಬಯಿ ಶೇರು 176 ಅಂಕ ಕುಸಿತ; ನಿಫ್ಟಿ 10,200ರ ಕೆಳಮಟ್ಟಕ್ಕೆ

04:15 PM Oct 30, 2018 | udayavani editorial |

ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರದ ವಹಿವಾಟನ್ನು 176.27 ಅಂಕಗಳ ನಷ್ಟದೊಂದಿಗೆ 33,891.13 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.

Advertisement

ಇದೇ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 52.45 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 10,198.40 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಡಾಲರ್‌ ಎದುರು ರೂಪಾಯಿಯ ದೌರ್ಬಲ್ಯ, ವಿದೇಶಿ ಬಂಡವಾಳದ ನಿರಂತರ ಹೊರ ಹರಿವು, ಏಶ್ಯನ್‌ ಶೇರು ಪೇಟೆಗಳಲ್ಲಿನ ನಿಸ್ತೇಜ ವಾತಾವರಣ ಇವೇ ಮೊದಲಾದ ಕಾರಣಕ್ಕೆ ಮುಂಬಯಿ ಶೇರು ಮಾರುಕಟ್ಟೆ ಕುಸಿತಕ್ಕೆ ಗುರಿಯಾಯಿತು.

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,709 ಕಂಪೆನಿಗಳ ಶೇರುಗಳು ವಹಿವಾಟಿಗೆ ಗುರಿಯಾದವು; 1,79 ಶೇರುಗಳು ಮುನ್ನಡೆ ಕಂಡವು; 1,080 ಶೇರುಗಳು ಹಿನ್ನಡೆಗೆ ಗುರಿಯಾದವು; 150 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ. 

Advertisement

Udayavani is now on Telegram. Click here to join our channel and stay updated with the latest news.

Next