ಮುಂಬಯಿ : ನಿರಂತರ ಮೂರನೇ ದಿನವಾಗಿ ಇಂದು ಹೊಸ ಸಾರ್ವಕಾಲಿಕ ಎತ್ತರಕ್ಕೆ ಜಿಗಿದು ಬಳಿಕ ಅಲ್ಲಿಂದ ಹಿಂದೆ ಸರಿದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ವಹಿವಾಟನ್ನು 173.70 ಅಂಕಗಳ ನಷ್ಟದೊಂದಿಗೆ 38,722.93 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 46.60 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 11,691.90 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ರಿಲಯನ್ಸ್ ಇಂಡಸ್ಟ್ರೀಸ್, ಎಚ್ ಡಿ ಎಫ್ ಸಿ ಮತ್ತು ಇನ್‌ಫೋಸಿಸ್ ಶೇರುಗಳ ಲಾಭನಗದೀಕರಣದ ಮಾರಾಟವೇ ಇಂದು ಸೆನ್ಸೆಕ್ಸ್, ನಿಫ್ಟಿ ಹಿನ್ನಡೆಗೆ ಕಾರಣವಾಯಿತು.
ಡಾಲರ್ ಎದುರು ರೂಪಾಯಿ ಇಂದು ವಹಿವಾಟಿನ ನಡುವೆ 70.57 ರೂ.ಗಳ ಸಾರ್ವಕಾಲಿಕ ದಾಖಲೆಯ ತಳ ಮಟ್ಟಕ್ಕೆ ಕುಸಿದದ್ದು ಕೂಡ ಶೇರು ಮಾರುಕಟ್ಟೆಯ ಹಿನ್ನಡೆಗೆ ಕಾರಣವಾಯಿತು.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,876 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 1,281 ಶೇರುಗಳು ಮುನ್ನಡೆ ಸಾಧಿಸಿದವು; 1,429 ಶೇರುಗಳು ಹಿನ್ನಡೆಗೆ ಗುರಿಯಾದವು; 166 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.