ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 100ಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಯಿತು.
ಕಳೆದ ಐದು ದಿನಗಳಲ್ಲಿ ಸೆನ್ಸೆಕ್ಸ್ ಒಟ್ಟು 840 ಅಂಕಗಳನ್ನು ಕಳೆದುಕೊಂಡಿರುವುದು ಗಮನಾರ್ಹವಾಗಿದೆ.
ವಿದೇಶೀ ಬಂಡವಾಳದ ಭಾರೀ ಹೊರ ಹರಿವು, ಏರುತ್ತಿರುವ ಜಾಗತಿಕ ಕಚ್ಚಾ ತೈಲ ಬೆಲೆ, ಏಶ್ಯನ್ ಶೇರು ಪೇಟೆಗಳಲ್ಲಿನ ಋಣಾತ್ಮಕ ಸನ್ನಿವೇಶ ಇವೇ ಮೊದಲಾದ ಕಾರಣಗಳಿಗೆ ಮುಂಬಯಿ ಶೇರು ಪೇಟೆ ಮಂಕಾಗಿದೆ.
ಬೆಳಗ್ಗೆ 11.15ರ ಹೊತ್ತಿಗೆ ಸೆನ್ಸೆಕ್ಸ್ 132.82 ಅಂಕಗಳ ನಷ್ಟದೊಂದಿಗೆ 35,898.29 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10,742.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಎಸ್ ಬ್ಯಾಂಕ್, ಇಂಡಿಯಾ ಬುಲ್ಸ್ ಹೌಸಿಂಗ್, ಝೀ ಎಂಟರ್‌ಟೇನ್‌ಮೆಂಟ್, ಹೀರೋ ಮೋಟೋಕಾರ್ಪ್, ಅದಾನಿ ಪೋರ್ಟ್ ಶೇರುಗಳು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ ಅತ್ಯಂತ ಸಕ್ರಿಯವಾಗಿದ್ದವು.
ಡಾಲರ್ ಎದುರು ರೂಪಾಯಿ ಇಂದು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 14 ಪೈಸೆಗಳ ನಷ್ಟಕ್ಕೆ ಗುರಿಯಾಗಿ 70.94 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.