ಮುಂಬಯಿ : ಏಶ್ಯನ್ ಶೇರುಪೇಟೆಯಲ್ಲಿ ಮಿಶ್ರ ಪ್ರತಿಕ್ರಿಯೆ ತೋರಿ ಬಂದ ಹೊರತಾಗಿಯೂ ದೇಶೀಯ ಹೂಡಿಕೆ ಸಂಸ್ಥೆಗಳು ಮುಂಚೂಣಿ ಶೇರು ಖರೀದಿಯಲ್ಲಿ ತೊಡಗಿಕೊಂಡ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 66 ಅಂಕಗಳ ಏರಿಕೆಯನ್ನು ದಾಖಲಿಸಿದೆ.
ಇದೇ ರೀತಿಯ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 15.75 ಅಂಕಗಳ ಏರಿಕೆಯನ್ನು ದಾಖಲಿಸಿತು.
ಬೆಳಗ್ಗೆ 10.35ರ ಹೊತ್ತಿಗೆ ಸೆನ್ಸೆಕ್ಸ್ 14.49 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 35,614.31 ಅಂಕಗಳ ಮಟ್ಟದಲ್ಲೂ ನಿಫ್ಟಿ 7.30 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 10,815.30 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಡಾಲರ್ ಎದುರು ರೂಪಾಯಿ ಇಂದು 36 ಪೈಸೆಗಳ ಕುಸಿತವನ್ನು ಕಂಡ 67.98 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಮುಂಬಯಿ ಶೇರು ಪೇಟೆಯ ಇಂದಿನ ಆರಂಭಿಕ ವಹಿವಟಿನಲ್ಲಿ ಡಾ. ರೆಡ್ಡಿ, ಸನ್ ಫಾರ್ಮಾ, ಆರ್‌ಐಎಲ್, ಟಿಸಿಎಸ್, ಇನ್‌ಫೋಸಿಸ್, ಐಸಿಐಸಿಐ ಬ್ಯಾಂಕ್, ಟಾಟಾ ಸ್ಟೀಲ್, ವಿಪ್ರೋ, ಟಾಟಾ ಮೋಟರ್, ಕೋಲ್ ಇಂಡಿಯಾ ಮತ್ತು ಎಕ್ಸಿಸ್ ಬ್ಯಾಂಕ್ ಶೇರುಗಳು ಶೇ.2.77ರ ಮುನ್ನಡೆಯನ್ನು ಕಂಡವು.