ಮುಂಬಯಿ : ನಿರಂತರ ಮೂರನೇ ದಿನವೂ ಜಿಗಿತ ಕಂಡ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರದ ವಹಿವಾಟನ್ನು 150.57 ಅಂಕಗಳ ಮುನ್ನಡೆಯೊಂದಿಗೆ 35,929.64 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 53.95 ಅಂಕಗಳ ಏರಿಕೆಯೊಂದಿಗೆ ದಿನದ ವಹಿವಾಟನ್ನು 10,791.55 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ನೂತನ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಆರ್‌ಬಿಐ ಗೆ ಸಂಬಂಧಿಸಿದ ಎಲ್ಲ ವಿಷಯಗಳನ್ನು ಎಲ್ಲ ಹಿತಾಸಕ್ತಿದಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿಭಾಯಿಸಲಾಗುವುದು ಎಂದು ಆಶ್ವಾಸನೆ ನೀಡಿರುವುದು ಶೇರು ಪೇಟೆಗೆ ಮತ್ತಷ್ಟು ಉತ್ತೇಜನ ತುಂಬಿತು.
ಇಂದಿನ ಪ್ರಮುಖ ಗೇನರ್‌ಗಳಾದ ವಿಪ್ರೋ, ಕೋಟಕ್ ಬ್ಯಾಂಕ್, ಇನ್‌ಫೋಸಿಸ್, ಮಾರುತಿ, ಟಾಟಾ ಮೋಟರ್, ಎಲ್ ಆ್ಯಂಡ್ ಟಿ, ಇಂಡಸ್‌ಇಂಡ್ ಬ್ಯಾಂಕ್, ಹೀರೋ ಮೋಟೋ ಕಾರ್ಪ್, ಮಹೀಂದ್ರ, ಎಸ್‌ಬಿಐ, ಎಚ್ ಡಿ ಎಫ್ ಸಿ ಬ್ಯಾಂಕ್ ಶೇ.3ರ ಏರಿಕೆಯನ್ನು ಕಂಡವು.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,695 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,497 ಕಂಪೆನಿಗಳು ಮುನ್ನಡೆ ಸಾಧಿಸಿದವು; 1,062 ಕಂಪೆನಿಗಳು ಹಿನ್ನಡೆಗೆ ಗುರಿಯಾದವು; 136 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ.