ಮುಂಬಯಿ : ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ತೋರಿ ಬಂದಿರುವ ಧನಾತ್ಮಕತೆಯನ್ನು ಅನುಸರಿಸಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ವಹಿವಾಟನ್ನು 276.50 ಅಂಕಗಳ ಭರ್ಜರಿ ಜಿಗಿತದೊಂದಿಗೆ 32,158.66 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 87 ಅಂಕಗಳ ಮುನ್ನಡೆಯನ್ನು ದಾಖಲಿಸಿ ದಿನದ ವಹಿವಾಟನ್ನು 10,093.05 ಅಂಕಗಳ ಮಟ್ಟದಲ್ಲಿ ಆಶಾದಾಯಕವಾಗಿ ಕೊನೆಗೊಳಿಸಿದೆ.
ಸೆನ್ಸೆಕ್ಸ್ ಮತ್ತು ನಿಫ್ಟಿ ನಿರಂತರ ಎರಡನೇ ದಿನವಾದ ಇಂದು ಮುನ್ನಡೆ ಸಾಧಿಸಿರುವುದು ಗಮನಾರ್ಹವಾಗಿದೆ.
ಇಂದು ವಹಿವಾಟಿಗೆ ಒಳಪಟ್ಟ ಶೇರುಗಳ ಪೈಕಿ 1,436 ಶೇರುಗಳು ಮುನ್ನಡೆ ಸಾಧಿಸಿದರೆ 1,151 ಶೇರುಗಳು ಹಿನ್ನಡೆಗೆ ಗುರಿಯಾದವು; 162 ಶೇರುಗಳ ಧಾರಣೆಯಲ್ಲಿ ಯಾವುದೇ ಬದಲಾವಣೆ ಕಂಡುಬರಲಿಲ್ಲ.
ಟಾಟಾ ಮೋಟರ್, ಟಾಟಾ ಮೋಟರ್ ಡಿವಿಆರ್, ಬಿಪಿಸಿಎಲ್, ಗೇಲ್ ಶೇರುಗಳು ಟಾಪ್ ಗೇನರ್ ಎನಿಸಿಕೊಂಡವು. ವಿಪ್ರೋ, ಹೀರೋ ಮೋಟೋ ಕಾರ್ಪ್ ಮತ್ತು ಇಂಡಸ್ ಇಂಡ್ ಬ್ಯಾಂಕ್ ಶೇರು ಟಾಪ್ ಲೂಸರ್ ಎನಿಸಿಕೊಂಡವು.