ಮುಂಬಯಿ : ಮಾರ್ಚ್ ತಿಂಗಳ ವಾಯಿದೆ ವಹಿವಾಟು ಸರಣಿಯನ್ನು ಮುಂಬಯಿ ಶೇರು ಪೇಟೆ ಅತ್ಯಂತ ದೃಢತೆಯಿಂದ ಮುಂದಕ್ಕೊಯ್ಯುತ್ತಿದೆ.
ಇಂದು ಸೋಮವಾರದ ವಹಿವಾಟನ್ನು ಸೆನ್ಸೆಕ್ಸ್ 303.60 ಅಂಕಗಳ ಭರ್ಜರಿ ಜಿಗಿತದೊಂದಿಗೆ 34,445.75 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 91.60 ಅಂಕಗಳ ಏರಿಕೆಯನ್ನು ದಾಖಲಿಸಿ 10,582.60 ಅಂಕಗಳ ಮಟ್ಟಕ್ಕೆ ಏರಿದೆ.
ಇಂದು ವಹಿವಾಟಿಗೆ ಒಳಪಟ್ಟ ಶೇರುಗಳ ಪೈಕಿ 1,606 ಶೇರುಗಳು ಮುನ್ನಡೆ ಸಾಧಿಸಿದವು; 1,159 ಶೇರುಗಳು ಹಿನ್ನಡೆಗೆ ಗುರಿಯಾದವು; 222 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಟಾ ಮೋಟರ್, ಲಾರ್ಸನ್ ಆ್ಯಂಡ್ ಟೂಬ್ರೋ, ಎಕ್ಸಿಸ್ ಬ್ಯಾಂಕ್ ಮತ್ತು ಯುಪಿಎಲ್ ಶೇರುಗಳು ಟಾಪ್ ಗೇನರ್ ಎನಿಸಿಕೊಂಡವು. ಸನ್ ಫಾರ್ಮಾ, ಇನ್‌ಫೋಸಿಸ್, ಟೆಕ್ ಮಹೀಂದ್ರ ಶೇರುಗಳು ಹಿನ್ನಡೆಗೆ ಗುರಿಯಾದವು.
ವಾಲ್ ಸ್ಟ್ರೀಟ್ ಶೇರುಗಳು ಮುನ್ನಡೆ ಕಂಡದ್ದನ್ನು ಅನುಸರಿಸಿ ಏಶ್ಯನ್ ಶೇರು ಮಾರುಕಟ್ಟೆಗಳು ಕೂಡ ಇಂದು ಮುನ್ನಡೆ ಸಾಧಿಸಿದವು. ಕಳೆದ ಶುಕ್ರವಾರದ ವಹಿವಾಟಿನಲ್ಲಿ ಸೆನ್ಸೆಕ್ಸ್ 322.65 ಅಂಕಗಳ ಏರಿಕೆಯನ್ನು ದಾಖಲಿಸಿತ್ತು.