ಮುಂಬಯಿ : ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ಸ್ಥಿರತೆಯ ಪ್ರವೃತ್ತಿ ತೋರಿ ಬಂದಿರುವುದನ್ನು ಅನುಸರಸಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 139 ಅಂಕಗಳ ಮುನ್ನಡೆಯನ್ನು ಸಾಧಿಸಿತು.
ಮೆಟಲ್, ಐಟಿ, ಟೆಕ್, ಕನ್ಸೂಮರ್ ಡ್ಯುರೇಬಲ್ಸ್ ಮತ್ತು ಎಫ್ಎಂಸಿಜಿ ಶೇರುಗಳ ಖರೀದಿಯಲ್ಲಿ ದೇಶೀಯ ಸಾಂಸ್ಥಿಕ ಹೂಡಿಕೆದಾರರು ಮತ್ತು ವಹವಾಟುದಾರರು ತೊಡಗಿಕೊಂಡದ್ದೇ ಸೆನ್ಸೆಕ್ಸ್ ಜಿಗಿತಕ್ಕೆ ಕಾರಣವಾಯಿತು.
ಬೆಳಗ್ಗೆ 10.40ರ ಹೊತ್ತಿಗೆ ಸೆನ್ಸೆಕ್ಸ್ 130.90 ಅಂಕಗಳ ಮುನ್ನಡೆಯೊಂದಿಗೆ 33,482.47 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 45.90 ಅಂಕಗಳ ಏರಿಕೆಯೊಂದಿಗೆ 10,288.60 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಟಾಟಾ ಸ್ಟೀಲ್, ಎಚ್‌ಡಿಎಫ್ಸಿ, ಎಸ್‌ಬಿಐ, ವೇದಾಂತ ಮತ್ತು ಐಸಿಐಸಿಐ ಬ್ಯಾಂಕ್ ಶೇರುಗಳು ಇಂದು ಬೆಳಗ್ಗಿನ ವಹಿವಾಟಿನಲ್ಲಿ ಹೆಚ್ಚು ಕ್ರಿಯಾಶೀಲವಾಗಿದ್ದವು.
ಡಾಲರ್ ಎದುರು ರೂಪಾಯಿ ವಿನಿಮಯ ದರ ಇಂದಿನ ಆರಂಭಿಕ ವಹಿವಾಟಿನಲ್ಲಿ ನಾಲ್ಕು ಪೈಸೆಯಷ್ಟು ಸುಧಾರಿಸಿ 65.10 ರೂ. ಮಟ್ಟದಲ್ಲಿ ದಾಖಲಾಗಿತ್ತು.