ಮುಂಬಯಿ : ದೇಶದ ಸ್ಥೂಲ ಆರ್ಥಿಕ ಪ್ರಗತಿಯ ಅಂಕಿ ಅಂಶಗಳು ಧನಾತ್ಮಕವಾಗಿರುವ ಹಿನ್ನೆಲೆಯಲ್ಲಿ ಸಾಂಸ್ಥಿಕ ಹೂಡಿಕೆದಾರರು ಮುಂಚೂಣಿ ಶೇರುಗಳ ಖರೀದಿಯಲ್ಲಿ ತೊಡಗಿಕೊಂಡ ಕಾರಣ ಮುಂಬಯಿ ಶೇರು ಪೇಟೆ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 173 ಅಂಕಗಳ ಮುನ್ನಡೆಯನ್ನು ಸಾಧಿಸಿತು.
ಡಾಲರ್ ಎದುರು ರೂಪಾಯಿ ವಿನಿಮಯ ದರ 19 ಪೈಸೆಯಷ್ಟು ಸುಧಾರಿಸಿ 64.13 ರೂ.ಗಳಲ್ಲಿ ಸ್ಥಿತವಾಗಿರುವುದು ಕೂಡ ಮುಂಬಯಿ ಶೇರು ಮಾರುಕಟ್ಟೆಯ ಹುರುಪನ್ನು ಹೆಚ್ಚಿಸಿತು.
ಬೆಳಗ್ಗೆ 10.15ರ ಹೊತ್ತಿಗೆ ಸೆನ್ಸೆಕ್ಸ್ 13.55 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 34,314.02 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 8.70 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 10,548.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಎಸ್‌ಬಿಐ, ಎಚ್ ಡಿ ಎಫ್ ಸಿ, ರಿಲಯನ್ಸ್, ಸನ್ ಫಾರ್ಮಾ, ಐಸಿಐಸಿಐ ಬ್ಯಾಂಕ್ ಶೇರುಗಳು ಬೆಳಗ್ಗಿನ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು.
ಇಂದು ಬೆಳಗ್ಗೆ 2,402 ಶೇರುಗಳು ವಹಿವಾಟಿಗೆ ಒಳಪಟ್ಟಿದ್ದವು; 1,522 ಶೇರುಗಳು ಮುನ್ನಡೆ ಕಂಡವು; 781 ಶೇರುಗಳು ಹಿನ್ನಡೆಗೆ ಗುರಿಯಾದವು; 99 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.