Advertisement

ಮುಂಬಯಿ ಶೇರು 96 ಅಂಕ ಕುಸಿತ; ನಿಫ್ಟಿ 10,800ರ ಕೆಳ ಮಟ್ಟಕ್ಕೆ

11:08 AM Jan 11, 2019 | |

ಮುಂಬಯಿ : ಜಾಗತಿಕ ಶೇರು ಪೇಟೆಗಳಲ್ಲಿ ಏರಿಕೆ ಕಂಡು ಬಂದ ಹೊರತಾಗಿಯೂ, ಹೂಡಿಕೆದಾರರು ಮತ್ತು ವಹಿವಾಟುದಾರರು ಈಚಿನ ಲಾಭದ ನಗದೀಕರಣಕ್ಕೆ ಮುಂದಾದ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಶುಕ್ರವಾರದ ವಹಿವಾಟನ್ನು 96 ಅಂಕಗಳ ನಷ್ಟದೊಂದಿಗೆ 36,009.84 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

Advertisement

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 26.65 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು10,794.95 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇಂಡಸ್‌ಇಂಡ್‌ ಬ್ಯಾಂಕ್‌, ಟಾಟಾ ಮೋಟರ್‌, ಟಿಸಿಎಸ್‌, ಎಸ್‌ ಬ್ಯಾಂಕ್‌, ಲಾರ್ಸನ್‌ ಕಂಪೆನಿ ಶೇರುಗಳು ಇಂದು ಪ್ರಮುಖ ಲೂಸರ್‌ಗಳೆನಿಸಿದವು. ಗೇನರ್‌ಗಳಲ್ಲಿ ಐಇಸಿ, ಒಎನ್‌ಜಿಸಿ, ವೇದಾಂತ, ಇನ್‌ಫೋಸಿಸ್‌, ಎಕ್ಸಿಸ್‌ ಬ್ಯಾಂಕ್‌, ಎಚ್‌ ಡಿ ಎಫ್ ಸಿ ಮುಖ್ಯವಾಗಿದ್ದವು. 

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು   ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ ಕಂಪೆನಿಗಳು ಮುನ್ನಡೆ ಸಾಧಿಸಿದವು;  ಕಂಪೆನಿಗಳು ಹಿನ್ನಡೆಗೆ ಗುರಿಯಾದವು;  ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ. 

Advertisement

Udayavani is now on Telegram. Click here to join our channel and stay updated with the latest news.

Next