ಮುಂಬಯಿ : ನಿರಂತರ ಐದನೇ ದಿನ ಕುಸಿತವನ್ನು ಕಂಡಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ವಹಿವಾಟನ್ನು 154.60 ಅಂಕಗಳ ನಷ್ಟದೊಂದಿಗೆ 38.157.92 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
ಇದೇ ವೇಳೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 62.05 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 11,520.30 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಸೆನ್ಸೆಕ್ಸ್ ಕಳೆದ ನಾಲ್ಕು ದಿನಗಳ ವಹಿವಾಟಿನಲ್ಲಿ 584.11 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು.
ಡಾಲರ್ ಎದುರು ರೂಪಾಯಿ ಹೊಸ ಸಾರ್ವಕಾಲಿಕ ತಳಮಟ್ಟಕ್ಕೆ ಕುಸಿದಿರುವುದು (71.54 ರೂ.), ವಿದೇಶಿ ಬಂಡವಾಳ ಹೊರ ಹರಿವು ನಿರಂತರವಾಗಿ ಸಾಗಿರುವುದು ಮತ್ತು ಅಂತಾರಾಷ್ಟ್ರೀಯ ಕಚ್ಚಾ ತೈಲದ ಬೆಲೆ ಒಂದೇ ಸಮನೆ ಏರುತ್ತಿರುವುದು ಶೇರು ಮಾರುಕಟ್ಟೆಯ ಹಿನ್ನಡೆಗೆ ಕಾರಣವಾಗಿದೆ.
ಮುಂಬಯಿ ಶೇರು ಮಾರುಕಟ್ಟೆಯಲ್ಲಿ ಇಂದು ಒಟ್ಟು 2,911 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 766 ಶೇರುಗಳು ಮುನ್ನಡೆ ಸಾಧಿಸಿದವು; 2,010 ಶೇರುಗಳು ಹಿನ್ನಡೆಗೆ ಗುರಿಯಾದವು; 135 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.