ಮುಂಬಯಿ : ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ತೋರಿ ಬಂದಿರುವ ದೌರ್ಬಲ್ಯ ಮತ್ತು ವಿದೇಶಿ ಬಂಡವಾಳದ ಹೊರ ಹರಿವು, ಇವೇ ಮೊದಲಾದ ಕಾರಣಕ್ಕೆ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 200ಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಯಿತು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಐಟಿ, ಟೆಕ್, ಮೆಟಲ್, ಕ್ಯಾಪಿಟಲ್ ಗೂಡ್ಸ್ ಮತ್ತು ವಿದ್ಯುದುತ್ಪಾದನೆ ಕ್ಷೇತ್ರದ ಶೇರುಗಳು ಹೆಚ್ಚು ಮಾರಾಟದ ಒತ್ತಡಕ್ಕೆ ಗುರಿಯಾದವು.
ಬೆಳಗ್ಗೆ 11 ಗಂಟೆಯ ವೇಳೆಗೆ ಸೆನ್ಸೆಕ್ಸ್ 300.15 ಅಂಕಗಳ ನಷ್ಟದೊಂದಿಗೆ 35,174.36 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯ,ಕ 75 ಅಂಕಗಳ ನಷ್ಟದೊಂದಿಗೆ 10,581.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ಡಾ. ರೆಡ್ಡೀಸ್ ಲ್ಯಾಬ್, ಎಸ್ ಬ್ಯಾಂಕ್, ಇನ್‌ಫೋಸಿಸ್, ರಿಲಯನ್ಸ್, ಐಸಿಐಸಿಐ ಬ್ಯಾಂಕ್ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಮುಂಬಯಿ ಶೇರು ಪೇಟೆಯಲ್ಲಿ ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ 2,171 ಒಟ್ಟು ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 886 ಕಂಪೆನಿಗಳು ಮುನ್ನಡೆ ಸಾಧಿಸಿದವು; 1,180 ಕಂಪೆನಿಗಳು ಹಿನ್ನಡೆಗೆ ಗುರಿಯಾದವು; 105 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ.