ಮುಂಬಯಿ : ರಿಲಯನ್ಸ್ ಇಂಡಸ್ಟ್ರೀಸ್, ಐಟಿ ಮತ್ತು ಇನ್‌ಫೋಸಿಸ್ ಮೊದಲಾದ ಮುಂಚೂಣಿ ಶೇರುಗಳು ಹೊಸದಾಗಿ ಏರಿಕೆಯನ್ನು ದಾಖಲಿಸಿದ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 68 ಅಂಕಗಳ ಮುನ್ನಡೆಯನ್ನು ಸಾಧಿಸಿತು.
ನಿನ್ನೆ ಮಂಗಳವಾರದ ವಹಿವಾಟನ್ನು ಸೆನ್ಸೆಕ್ಸ್ 105.85 ಅಂಕಗಳ ನಷ್ಟದಲ್ಲಿ ಮುಗಿಸಿತ್ತು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಪಿಎಸ್‌ಯು, ಕನ್ಸೂಮರ್ ಡ್ಯುರೇಬಲ್ಸ್, ಇನ್‌ಫ್ರಾಸ್ಟ್ರಕ್ಚರ್, ಕ್ಯಾಪಿಟಲ್ ಗೂಡ್ಸ್, ಹೆಲ್ತ್ ಕೇರ್ ಮತ್ತು ಐಟಿ ಶೇರುಗಳು ಶೇ.0.42ರ ಮುನ್ನಡೆ ಸಾಧಿಸಿದವು.
ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್ 35.22 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 33,653.81 ಅಂಕಗಳಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 8.10 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 10,378.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಎಚ್ ಡಿ ಎಫ್ ಸಿ, ಐಸಿಐಸಿಐ ಬ್ಯಾಂಕ್, ಎಸ್‌ಬಿಐ, ಮಾರುತಿ ಸುಜುಕಿ, ಎಕ್ಸಿಸ್ ಬ್ಯಾಂಕ್ ಶೇರುಗಳು ಅತೀ ಹೆಚ್ಚು ಕ್ರಿಯಾಶೀಲವಾಗಿದ್ದವು.