ಮುಂಬಯಿ : ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿನ ಸ್ಥಿರ ಪ್ರವೃತ್ತಿ ಮತ್ತು ಉತ್ತಮ ತ್ತೈಮಾಸಿಕ ಫಲಿತಾಂಶಗಳ ಹಿನ್ನೆಲೆಯಲ್ಲಿ ಮುಂಬಯಿ ಶೇರು ಪೇಟೆ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 92 ಅಂಕಗಳ ಮುನ್ನಡೆಯನ್ನು ಸಾಧಿಸಿತು.
ಕಳೆದ ಮೂರು ದಿನಗಳಿಂದ ಏರುಗತಿಯಲ್ಲಿ ಸಾಗಿ ಬಂದಿರುವ ಮುಂಬಯಿ ಶೇರು 410.44 ಅಂಕಗಳನ್ನು ಸಂಪಾದಿಸಿದೆ. ಇಂದಿನ ವಹಿವಾಟಿನಲ್ಲಿ ಐಟಿ, ಟೆಕ್, ಕ್ಯಾಪಿಟಲ್ ಗೂಡ್ಸ್, ಕನ್ಸೂಮರ್ ಡ್ಯುರೇಬಲ್ ಮತ್ತು ಎಫ್ಎಂಸಿಜಿ ಶೇರುಗಳು ಉತ್ತಮ ಖರೀದಿ ಬೆಂಬಲ ಪಡೆದುಕೊಂಡವು.
ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್‌ಸ 19.37 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 34,862.88 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 1.30 ಅಂಕಗಳ ನಷ್ಟದೊಂದಿಗೆ 10,740.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇನ್‌ಫೋಸಿಸ್, ಟಿಸಿಎಸ್, ಎಚ್ ಡಿ ಎಫ್ ಸಿ, ಎಸ್‌ಬಿಐ, ರಿಲಯನ್ಸ್ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಡಾಲರ್ ಎದುರು ಇಂದು ರೂಪಾಯಿ 12 ಪೈಸೆಯಷ್ಟು ದುರ್ಬಲಗೊಂಡು 63.61 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.