ಮುಂಬಯಿ : ಶೇರು ಮಾರುಕಟ್ಟೆಗೆ ವಿದೇಶಿ ಹೂಡಿಕೆ ನಿರಂತರವಾಗಿ ಹರಿದು ಬರುತ್ತಿರುವುದು, ರಿಲಯನ್ಸ್ ಇಂಡಸ್ಟ್ರೀಸ್ ನಿರೀಕ್ಷೆಗಿಂತಲೂ ಉತ್ತಮವಾದ ಡಿಸೆಂಬರ್ ತ್ತೈಮಾಸಿಕ ಫಲಿತಾಂಶ ಪ್ರಕಟಿಸಿರುವುದು, ಮುಂಬಯಿ ಶೇರು ಪೇಟೆಗೆ ಹೊಸ ಚೈತನ್ಯವನ್ನು ತುಂಬಿದೆ
ಅಂತೆಯೇ ಇಂದು ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 152.43 ಅಂಕಗಳ ಜಿಗಿತವನ್ನು ದಾಖಲಿಇಸ 35,664.01 ಅಂಕಗಳ ಸಾರ್ವಕಾಲಿಕ ಎತ್ತರದ ಮಟ್ಟವನ್ನು ತಲುಪಿತ್ತು.
ಇದೇ ರೀತಿಯ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 31.75 ಅಂಕಗಳ ಮುನ್ನಡೆಯನ್ನು ಸಾಧಿಸಿ ಹೊಸ ಎತ್ತರವಾಗಿ 10,926.45 ಅಂಕಗಳ ಮಟ್ಟವನ್ನು ತಲುಪಿತು.
ಬೆಳಗ್ಗೆ 10.40ರ ಹೊತ್ತಿಗೆ ಸೆನ್ಸೆಕ್ಸ್ 68.10 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 35,579.68 ಅಂಕಗಳ ಮಟ್ಟದಲ್ಲೂ ನಿಫ್ಟಿ 1.40 ಅಂಕಗಳ ನಷ್ಟದೊಂದಿಗೆ 10,893.30 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಒಎನ್‌ಜಿಸಿ, ರಿಲಯನ್ಸ್, ಕೋಟಕ್ ಮಹೀಂದ್ರ, ಎಚ್ ಡಿ ಎಫ್ ಸಿ ಬ್ಯಾಂಕ್, ಯಪಿಎಲ್ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.