Advertisement

4 ದಿನಗಳ ಸೋಲಿಗೆ ಬ್ರೇಕ್‌: ಮುಂಬಯಿ ಶೇರು 187 ಅಂಕ ಜಂಪ್‌

04:46 PM Oct 24, 2018 | udayavani editorial |

ಮುಂಬಯಿ : ನಿರಂತರ ನಾಲ್ಕು ದಿನಗಳ ನಷ್ಟದ ಹಾದಿಯಲ್ಲಿ ಸಾಗಿ ಬಂದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬುಧವಾರದ ವಹಿವಾಟನ್ನು 186.73 ಅಂಕಗಳ ಜಿಗಿತದೊಂದಿಗೆ  34,033.96 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತಲ್ಲದೆ ಆ ಮೂಲಕ ಮತ್ತೆ 34,000 ಅಂಕಗಳ ಮನೋ ಪ್ರಾಬಲ್ಯದ ಮಟ್ಟವನ್ನು ಪುನರ್‌ ಸಂಪಾದಿಸಿತು. 

Advertisement

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 77.95 ಅಂಕಗಳ ಜಿಗಿತವನ್ನು ದಾಖಲಿಸಿ ದಿನದ ವಹಿವಾಟನ್ನು 10,224.75 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಕಳೆದ ನಾಲ್ಕು  ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್‌ 1,315 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. ಡಾಲರ್‌ ಎದುರು ಇಂದು ರೂಪಾಯಿ 42 ಪೈಸೆಗಳ ಚೇತರಿಕೆಯನ್ನು ಕಂಡು 73.15 ರೂ. ಮಟ್ಟದಲ್ಲಿ ವ್ಯವಹಾರ ನಿರತವಾದದ್ದು, ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಇಳಿಕೆ ಕಂಡು ಬಂದದ್ದು ಇವೇ ಮೊದಲಾದ ಕಾರಣಗಳು ಇಂದು ಮುಂಬಯಿ ಶೇರು ಪೇಟೆಗೆ ಚೈತನ್ಯವನ್ನು ತುಂಬಿತು. 

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,716 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು. ಈ ಪೈಕಿ 1,363 ಶೇರುಗಳು ಮುನ್ನಡೆ ಸಾಧಿಸಿದವು; 1,203 ಶೇರುಗಳು ಹಿನ್ನಡೆಗೆ ಗುರಿಯಾದವು ಮತ್ತು 150 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

Advertisement

Udayavani is now on Telegram. Click here to join our channel and stay updated with the latest news.

Next