ಮುಂಬಯಿ : ಇಂದು ಗುರುವಾರ ಮಧ್ಯಾಹ್ನದ ವೇಳೆಗೆ ಪ್ರಕಟಗೊಳ್ಳಲಿರುವ ಆರ್ ಬಿ ಐ ದರ ನೀತಿಯು ಆಶಾದಾಯಕವಾಗಿರುವುದೆಂಬ ಲೆಕ್ಕಾಚಾರದಲ್ಲಿ ಮುಂಬಯಿ ಶೇರು ಪೇಟೆ ಇಂದು ಬೆಳಗ್ಗಿನ ವಹಿವಾಟಿನಲ್ಲಿ 160ಕ್ಕೂ ಹೆಚ್ಚು ಅಂಕಗಳ ಜಿಗಿತವನ್ನು ದಾಖಲಿಸಿತು.
ದೇಶೀಯ ಮತ್ತು ವಿದೇಶೀ ಹೂಡಿಕೆದಾರರು ಆರ್ ಬಿ ಐ ನೀತಿ ಬಗ್ಗೆ ಹೆಚ್ಚು ಆಶಾವಾದ ಹೊಂದಿರುವ ಕಾರಣ ಮುಂಚೂಣಿ ಶೇರುಗಳ ವ್ಯಾಪಕ ಖರೀದಿ ಇಂದು ಆರಂಭಿಕ ವಹಿವಾಟಿನಲ್ಲಿ ನಡೆಯಿತು.
ಬೆಳಗ್ಗೆ 10.30ರ ಸುಮಾರಿಗೆ ಸೆನ್ಸೆಕ್ಸ್ 101.50 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 37,076.73 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 25 ಅಂಕಗಳ ಏರಿಕೆಯೊಂದಿಗೆ 11,087.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಬಜಾಜ್ ಆಟೋ, ಸನ್ ಫಾರ್ಮಾ, ಇಂಡಿಯಾಬುಲ್ಸ್ ಹೌಸಿಂಗ್, ಝೀ ಎಂಟರ್‌ಟೇನ್‌ಮೆಂಟ್, ಟಾಟಾ ಮೋಟರ್ ಶೇರುಗಳು ಅತೀ ಹೆಚ್ಚು ಕ್ರಿಯಾಶೀಲವಾಗಿದ್ದವು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 20 ಪೈಸೆಗಳ ಕುಸಿತವನ್ನು ಕಂಡು 71.76 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.