ಮುಂಬಯಿ : ಮುಂಚೂಣಿ ಕಂಪೆನಿಗಳ ಹಾಲಿ ಹಣಕಾಸು ವರ್ಷದ ಎರಡನೇ ತ್ತೈಮಾಸಿಕ ಫಲಿತಾಂಶ ಆಶಾದಾಯಕವಾಗಿರಬಹುದು ಎಂಬ ಹೂಡಿಕೆದಾರರು ಮತ್ತು ವಹಿವಾಟುದಾರರ ಭರವಸೆಯ ಹಿನ್ನೆಲೆಯಲ್ಲಿ ಮುಂಬಯಿ ಶೇರುಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 200ಕ್ಕೂ ಅಧಿಕ ಅಂಕಗಳ ಮುನ್ನಡೆ ಸಾಧಿಸಿತು.
ಬೆಳಗ್ಗೆ 10.50ರ ಹೊತ್ತಿಗೆ ಸೆನ್ಸೆಕ್ಸ್ 326.04 ಅಂಕಗಳ ಏರಿಕೆಯೊಂದಿಗೆ 35,191.14 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 87.50 ಅಂಕಗಳ ಏರಿಕೆಯೊಂದಿಗೆ 10,600 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಡಾಲರ್ ಎದುರು ರೂಪಾಯಿ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 9 ಪೈಸೆಗಳ ಹಿನ್ನಡೆಯನ್ನು ಕಂಡು 73.92 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್ 864 ಅಂಕಗಳನ್ನು ಸಂಪಾದಿಸಿರುವುದು ಹೂಡಿಕೆದಾರರಲ್ಲಿ ಹೊಸ ಭರವಸೆಯನ್ನು ಸೃಷ್ಟಿಸಿದೆ.
ಇಂದಿನ ಆರಂಭಿಕ ವಹಿವಾಟಿನಲ್ಲಿ ಏಶ್ಯನ್ ಪೇಂಟ್, ಇಂಡಸ್ ಇಂಡ್ ಬ್ಯಾ,ಕ್, ಅದಾನಿ ಪೋರ್ಟ್, ಮಹೀಂದ್ರ, ಎಚ್‌ಯುಎಲ್, ಐಸಿಐಸಿಐ ಬ್ಯಾಂಕ್, ಎಸ್ ಬ್ಯಾಂಕ್, ಮಾರುತಿ ಸುಜುಕಿ, ಟಾಟಾ ಮೋಟರ್, ಇನ್‌ಫೋಸಿಸ್, ಬಜಾಜ್ ಆಟೋ ಮೊದಲಾದ ಮುಂಚೂಣಿ ಶೇರುಗಳು ಶೇ. 2.80 ಏರಿಕೆಯನ್ನು ದಾಖಲಿಸಿದವು.