Advertisement

ಮುಂಬಯಿ ಶೇರು 250ಕ್ಕೂ ಹೆಚ್ಚು ಅಂಕಗಳ ಜಿಗಿತ, ನಿಫ್ಟಿ ಮತ್ತೆ 10,900

05:55 AM Jan 25, 2019 | |

ಮುಂಬಯಿ : ಮುಂಚೂಣಿ ಕಂಪೆನಿಗಳ ಡಿಸೆಂಬರ್‌ ತ್ತೈಮಾಸಿಕ ಫ‌ಲಿತಾಂಶ ಉತ್ತೇಜನಕಾರಿಯಾಗಿರುವ ಹಿನ್ನೆಲೆಯಲ್ಲಿ ದೇಶೀಯ ಹೂಡಿಕೆದಾರ ಸಂಸ್ಥೆಗಳು ಮತ್ತು ಚಿಲ್ಲರೆ ಹೂಡಿಕೆದಾರರು ಬ್ಲೂ ಚಿಪ್‌ ಶೇರುಗಳ ವ್ಯಾಪಕ ಖರೀದಿಯಲ್ಲಿ ತೊಡಗಿಕೊಂಡ ಕಾರಣ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ 250ಕ್ಕೂ ಅಧಿಕ ಅಂಕಗಳ ಜಿಗಿತವನ್ನು ದಾಖಲಿಸಿತು. ಅಂತೆಯೇ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10,900 ಅಂಕಗಳ ಮಟ್ಟವನ್ನು ಪುನರ್‌ ಸಂಪಾದಿಸಿತು. 

Advertisement

ನಿನ್ನೆ ಗುರುವಾರದ ವಹಿವಾಟಿನಲ್ಲಿ ಸೆನ್ಸೆಕ್ಸ್‌ 87 ಅಂಕಗಳನ್ನು ಸಂಪಾದಿಸಿತ್ತು. ಇಂದು ಬೆಳಗ್ಗೆ 11.30ರ ಸುಮಾರಿಗೆ ಸೆನ್ಸೆಕ್ಸ್‌  220.54 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 36,415.64 ಅಂಕಗಳ ಮಟ್ಟದಲ್ಲೂ, ನಿಫ್ಟಿ 55.60 ಅಂಕಗಳ ಮುನ್ನಡೆಯೊಂದಿಗೆ 10,905.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಎಸ್‌ ಬ್ಯಾಂಕ್‌, ರಿಲಯನ್ಸ್‌, ಐಸಿಐಸಿಐ ಬ್ಯಾಂಕ್‌, ಎಚ್‌ ಡಿ ಎಫ್ ಸಿ ಬ್ಯಾಂಕ್‌, ಎಚ್‌ ಡಿ ಎಫ್ ಸಿ ಶೇರುಗಳು ಇಂದು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು. 

ಡಾಲರ್‌ ಎದುರಿನ ಇಂದಿನ ಆರಂಭಿಕ ವಹಿವಾಟಿನಲ್ಲಿ ರೂಪಾಯಿ 10 ಪೈಸೆಗಳ ಏರಿಕೆಯನ್ನು ದಾಖಲಿಸಿ 70.97 ರೂ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

Advertisement

Udayavani is now on Telegram. Click here to join our channel and stay updated with the latest news.

Next