ಮುಂಬಯಿ : ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ತೋರಿಬಂದಿರುವ ಮಿಶ್ರ ಪ್ರತಿಕ್ರಿಯೆ ಹಾಗೂ ಐರೋಪ್ಯ ಮಾರುಕಟ್ಟೆಗಳಲ್ಲಿನ ದೌರ್ಬಲ್ಯವನ್ನು ಅನುಲಕ್ಷಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರದ ವಹಿವಾಟನ್ನು ಕೇವಲ 7.1 ಅಂಕಗಳ ಮುನ್ನಡೆಯೊಂದಿಗೆ ನಿರಾಶಾದಾಯಕವಾಗಿ ಕೊನೆಗೊಳಿಸಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 3.6 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 9,630 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇಂದಿನ ವಹಿವಾಟಿನಲ್ಲಿ ಸನ್ ಫಾರ್ಮಾ, ಎಸ್‌ಬಿಐ, ಎಚ್ ಡಿ ಎಫ್ ಸಿ, ರಿಲಯನ್ಸ್, ಬಜಾಜ್ ಆಟೋ ಶೇರುಗಳು ಟಾಪ್ ಗೇನರ್ ಎನಿಸಿದವು.
ಇದಕ್ಕೆ ವ್ಯತಿರಿಕ್ತವಾಗಿ ಓಎನ್‌ಜಿಸಿ, ಎಚ್‌ಯುಎಲ್, ಲೂಪಿನ್, ಪವರ್ ಗ್ರಿಡ್, ಡಾ. ರೆಡ್ಡಿ ಶೇರುಗಳು ಕೆಳಮುಖವಾದವು.
ಇಂದು ಒಟ್ಟು 3,009 ಶೇರುಗಳು ವಹಿವಾಟಿಗೆ ಒಳಪಟ್ಟವು; 1,215 ಶೇರುಗಳು ಮುನ್ನಡೆ ಪಡೆದವು; 1,620 ಶೇರುಗಳು ಹಿನ್ನಡೆಗೆ ಗುರಿಯಾದವು; 174 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.