ಮುಂಬಯಿ : ಅಮೆರಿಕದ ಫೆಡರಲ್ ರಿಸರ್ವ್ ಬ್ಯಾಂಕ್ ತನ್ನ ಬಡ್ಡಿದರ ಪರಿಷ್ಕರಣೆ ಕುರಿತಾಗಿ ಇಂದು ಸಂಜೆ ನಿರ್ಣಾಯಕ ಸಭೆ ನಡೆಸಲಿದ್ದು ಅದಕ್ಕೆ ಮುನ್ನವೇ ಮುಂಬಯಿ ಶೇರು ಮಾರುಕಟ್ಟೆಯಲ್ಲಿ ಎಚ್ಚರಿಕೆಯ ನಡೆ ಕಂಡು ಬಂದಿರುವ ಕಾರಣ ಸೆನ್ಸೆಕ್ಸ್ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 112 ಅಂಕಗಳ ನಷ್ಟಕ್ಕೆ ಗುರಿಯಾಯಿತು.
ಮೆಟಲ್, ಹೆಲ್ತ್ ಕೇರ್, ರಿಯಲ್ಟಿ, ಕನ್ಸೂಮರ್ ಡ್ಯುರೇಬಲ್ಸ್ ಮತ್ತು ಬ್ಯಾಂಕಿಂಗ್ ಶೇರುಗಳು ತೀವ್ರ ಒತ್ತಡಕ್ಕೆ ಗುರಿಯಾಗಿ ಹಿನ್ನಡೆಗೆ ಗುರಿಯಾದವು.
ಇದಕ್ಕೆ ಪೂರಕವಾಗಿ ಇಂದು ಏಶ್ಯನ್ ಶೇರು ಮಾರುಕಟ್ಟೆಯಲ್ಲಿ ದುರ್ಬಲ ಪ್ರವೃತ್ತಿ ತೋರಿಬಂದಿದೆ. ವಾಲ್‌ಸ್ಟ್ರೀಟ್‌ನಲ್ಲಿ ನಿನ್ನೆ ಕುಸಿತ ದಾಖಲಾಗಿರುವುದು ಕೂಡ ಇದಕ್ಕೆ ಕಾರಣವಾಗಿದೆ ಎಂದು ಬ್ರೋಕರ್‌ಗಳು ಅಭಿಪ್ರಾಯಪಟ್ಟಿದ್ದಾರೆ.
ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ್ 83.79 ಅಂಕಗಳ ಮುನ್ನಡೆಯನ್ನು ಸಾಧಿಸಿ 33,006.91 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 22.10 ಅಂಕಗಳ ನಷ್ಟಕ್ಕೆ ಗುರಿಯಾಗಿ 10,116.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಟಾಟಾ ಸ್ಟೀಲ್, ವೇದಾಂತ, ಟಿಸಿಎಸ್, ಎಸ್‌ಬಿಐ, ಸಿಪ್ಲಾ ಶೇರುಗಳು ಇಂದು ಬೆಳಗ್ಗಿನ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು.
ಡಾಲರ್ ಎದುರು ಇಂದು ರೂಪಾಯಿ ನಾಲ್ಕು ಪೈಸೆಯಷ್ಟು ಹಿನ್ನಡೆಗೆ ಗುರಿಯಾಗಿ 65.21 ರೂ. ಮಟ್ಟಕ್ಕೆ ಇಳಿಯಿತು.