ಮುಂಬಯಿ : ಎರಡು ದಿನಗಳ ವಹಿವಾಟಿನಲ್ಲಿ ನಿರಂತರ ನಷ್ಟ ಅನುಭವಿಸಿದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರದ ವಹಿವಾಟನ್ನು ಅಲ್ಪ ಗಳಿಕೆಯೊಂದಿಗೆ ಕೊನೆಗೊಳಿಸಿತು.
ದಿನಾಂತ್ಯಕ್ಕೆ ಸೆನ್ಸೆಕ್ಸ್ 32.12 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 33,250. 93 ಅಂಕಗಳ ಮಟ್ಟವನ್ನು ತಲುಪಿತಾದರೆ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 5.80 ಅಂಕಗಳ ಕಿಂಚಿತ್ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 10,309 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇಂದು ವಹಿವಾಟಿಗೆ ಒಳಪಟ್ಟ ಶೇರುಗಳ ಪೈಕಿ 1,485 ಶೇರುಗಳು ಮುನ್ನಡೆ ಸಾಧಿಸಿದರೆ, 1,211 ಶೇರುಗಳು ಹಿನ್ನಡೆಗೆ ಗುರಿಯಾದವು.
ಇಂದು ಐಸಿಐಸಿಐ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಇಂಡಿಯಾ ಬುಲ್ ಹೌಸಿಂಗ್ ಶೇರುಗಳು ಟಾಪ್ ಗೇನರ್ ಎನಿಸಿಕೊಂಡವು.
ಇದೇ ವೇಳೆ ಒಎನ್‌ಜಿಸಿ, ಭಾರ್ತಿ ಏರ್‌ಟೆಲ್, ಕೋಲ್ ಇಂಡಿಯಾ ಶೇರುಗಳು ಹಿನ್ನಡೆಗೆ ಗುರಿಯಾದವು.