ಮುಂಬಯಿ : ಭಾರತ – ಪಾಕ್ ನಡುವಿನ ಉದ್ವಿಗ್ನತೆ ಮತ್ತು ಫೆಬ್ರವರಿ ತಿಂಗಳ ವಾಯಿದೆ ವಹಿವಾಟು ಚುಕ್ತಾ ಗಡುವಿನ ಪರಿಣಾಮವಾಗಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರದ ವಹಿವಾಟನ್ನು 37.99 ಅಂಕಗಳ ನಷ್ಟದೊಂದಿಗೆ 35,867.44 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 15.70 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,792.50 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇಂದಿನ ಟಾಪ್ ಲೂಸರ್‌ಗಳಾಗಿರುವ ಟಿಸಿಎಸ್, ಮಾರುತಿ, ಹೀರೋ ಮೋಟೋ ಕಾರ್ಪ್, ಮಹೀಂದ್ರ, ಎಕ್ಸಿಸ್ ಬ್ಯಾಂಕ್ ಮತ್ತು ಟಾಟಾ ಸ್ಟೀಲ್ ಶೇ.3.38ರಷ್ಟು ಕುಸಿದವು.
ಇದೇ ವೇಳೆ ಒಎನ್‌ಜಿಸಿ, ಕೋಲ್ ಇಂಡಿಯಾ, ವೇದಾಂತ, ಎನ್‌ಟಿಪಿಸಿ, ಎಸ್ ಬ್ಯಾಂಕ್, ಎಸ್‌ಬಿಐ, ಎಲ್ ಆ್ಯಂಡ್ ಟಿ, ಐಸಿಐಸಿಐ ಬ್ಯಾಂಕ್, ಸನ್ ಫಾರ್ಮಾ, ಆರ್‌ಐಎಲ್, ಪವರ್ ಗ್ರಿಡ್, ಐಟಿಸಿ ಶàರುಗಳು ಶೇ.4.17ರ ಏರಿಕೆಯನ್ನು ದಾಖಲಿಸಿದವು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,650 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,463 ಶೇರುಗಳು ಮುನ್ನಡೆ ಸಾಧಿಸಿದವು; 1,029 ಶೇರುಗಳು ಹಿನ್ನಡೆಗೆ ಗುರಿಯಾದವು; 158 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.