ಮುಂಬಯಿ : ಡಾಲರ್ ಎದುರು ರೂಪಾಯಿ ವಿನಿಮಯ ದರ 26 ಪೈಸೆಯಷ್ಟು ಕುಸಿದ ಪರಿಣಾಮವಾಗಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹವಾಟಿನಲ್ಲಿ 43 ಅಂಕಗಳ ನಷ್ಟಕ್ಕೆ ಗುರಿಯಾಯಿತು.
ಬೆಳಗ್ಗೆ 10.40ರ ಹೊತ್ತಿಗೆ ಸೆನ್ಸೆಕ್ಸ್ 150.46 ಅಂಕಗಳ ನಷ್ಟಕ್ಕೆ ಗುರಿಯಾಗಿ 32,250.05 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 53.90 ಅಂಕಗಳ ನಷ್ಟಕ್ಕೆ ಗುರಿಯಾಗಿ 10,087.30 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಬ್ಯಾಂಕ್ ನಿಫ್ಟಿ 183.25 ಅಂಕಗಳ ನಷ್ಟಕ್ಕೆ ಗುರಿಯಾಯಿತಾದರೆ ಐಟಿ ನಿಫ್ಟಿ 25.40 ಅಂಕಗಳ ನಷ್ಟಕ್ಕೆ ಗುರಿಯಾಯಿತು.
ಡಾ. ರೆಡ್ಡಿ, ಎಚ್ ಡಿ ಎಫ್ ಸಿ, ಟಾಟಾ ಸ್ಟೀಲ್, ಲೂಪಿನ್ ಮತ್ತು ಎಸ್ ಬ್ಯಾಂಕ್ ಶೇರುಗಳು ಇಂದು ಬೆಳಗ್ಗೆ ಹೆಚ್ಚು ಕ್ರಿಯಾಶೀಲವಾಗಿದ್ದವು. ಏಶ್ಯನ್ ಶೇರು ಮಾರುಕಟ್ಟೆಗಳ ಪೈಕಿ ಜಪಾನಿನ ನಿಕ್ಕಿ ಶೇ.0.83, ಶಾಂಘೈ ಕಾಂಪೋಸಿಟ್ ಇಂಡೆಕ್ಸ್ ಶೇ.0.12, ಹಾಂಕಾಂಗ್ ನ ಹ್ಯಾಂಗ್ ಸೆಂಗ್ ಶೇ.0.13ರಷ್ಟು ಏರಿದವು.
ಅಮೆರಿಕದ ಡೋವ್ ಜೋನ್ಸ್ ನಿನ್ನೆಯ ವಹಿವಾಟಿನಲ್ಲಿ ಶೇ.0.19ರಷ್ಟು ಏರಿತ್ತು.