ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದು ಬುಧವಾರದ ವಹಿವಾಟನ್ನು ಹೊಸ ಸಾರ್ವಕಾಲಿಕ ದಾಖಲೆಯ ಎತ್ತರದಲ್ಲಿ ಕೊನೆಗೊಳಿಸಿದವು.
ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದ ಹೊರತಾಗಿಯೂ ಮುಂಬಯಿ ಶೇರು ಪೇಟೆಯಲ್ಲಿ ಇಂದು ತೇಜಿ ಕಂಡು ಬಂದು ಆರ್‌ಐಎಲ್ ಮತ್ತು ಬ್ಯಾಂಕಿಂಗ್ ರಂಗದ ಶೇರುಗಳು ಸೆನ್ಸೆಕ್ಸ್, ನಿಫ್ಟಿ ತಾಜಾ ದಾಖಲೆಯ ಎತ್ತರಕ್ಕೆ ಕಾರಣವಾದವು.
ಸೆನ್ಸೆಕ್ಸ್ ಇಂದು 221.76 ಅಂಕಗಳ ಜಿಗಿತವನ್ನು ದಾಖಲಿಸಿ ದಿನದ ವಹಿವಾಟನ್ನು ಹೊಸ ಸಾರ್ವಕಾಲಿಕ ದಾಖಲೆಯ ಎತ್ತರದ 37,887.56 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. ನಿಫ್ಟಿ 60.55 ಅಂಕಗಳ ಜಿಗಿತವನ್ನು ದಾಖಲಿಸಿ 11,400 ಅಂಕಗಳ ಗಡಿಯನ್ನು ದಾಟಿ 11,450 ಅಂಕಗಳ ಮಟ್ಟದಲ್ಲಿ ವಿಜೃಂಭಿಸಿತು.
ಇಂದಿನ ಟಾಪ್ ಗೇನರ್‌ಗಳಲ್ಲಿ ಆರ್‌ಐಎಲ್, ಎಸ್‌ಬಿಐ, ಐಸಿಐಸಿಐ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್, ಎಕ್ಸಿಸ್ ಬ್ಯಾಂಕ್, ಕೋಟಕ್ ಬ್ಯಾಂಕ್, ಎಸ್ ಬ್ಯಾಂಕ್, ಎಚ್ ಡಿ ಎಫ್ ಸಿ ಬ್ಯಾಂಕ್ ಶೇರುಗಳು ವಿಜೃಂಭಿಸಿದವು.
ರಿಲಯನ್ಸ್ ಕಂಪೆನಿಯ ಶೇರು ಇಂದು ಶೇ.2.85ರ ಏರಿಕೆಯನ್ನು ದಾಖಲಿಸಿ 1,217.25 ರೂ. ಮಟ್ಟಕ್ಕೆ ಜಿಗಿಯಿತು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,869 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 1,315 ಶೇರುಗಳು ಮುನ್ನಡೆ ಸಾಧಿಸಿದವು; 1,422 ಶೇರುಗಳು ಹಿನ್ನಡೆಗೆ ಗುರಿಯಾದವು; 132 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.