ಮುಂಬಯಿ : ಇಂದು ಸೋಮವಾರ ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 200ಕ್ಕೂ ಅಧಿಕ ಅಂಕಗಳ ಏರಿಕೆಯನ್ನು ಕಂಡ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಅನಂತರ ನಷ್ಟದ ಹಾದಿಗೆ ತಿರುಗಿಕೊಂಡಿತು. ಡಾಲರ್ ಎದುರು ರೂಪಾಯಿ ಚೇತರಿಕೆ ಕಂಡ ಹೊರತಾಗಿಯೂ ಐಟಿ ಮತ್ತು ಫಾರ್ಮಾ ಕ್ಷೇತ್ರದ ಶೇರುಗಳು ಕುಸಿತಕ್ಕೆ ಗುರಿಯಾದವು.
ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ್ ಮತ್ತೆ ಏರು ಹಾದಿಯತ್ತ ಹೊರಳಿ 85.24 ಅಂಕಗಳ ಏರಿಕೆಯೊಂದಿಗೆ 35,066.26 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಕ 18.60 ಅಂಕಗಳ ಮುನ್ನಡೆಯೊಂದಿಗೆ 10,545.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಡಾಲರ್ ಎದುರು ರೂಪಾಯಿ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 39 ಪೈಸೆಗಳ ಚೇತರಿಕೆಯನ್ನು ಕಂಡು 70.30 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಇಂದಿನ ಬೆಳಗ್ಗಿನ ವಹಿವಾಟಿಲ್ಲಿ ಎಸ್ ಬ್ಯಾಂಕ್, ಇನ್‌ಫೋಸಿಸ್, ರಿಲಯನ್ಸ್, ಟಿಸಿಎಸ್, ಎಚ್ ಡಿ ಎಫ್ ಸಿ ಬ್ಯಾಂಕ್ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ಗೇನರ್‌ಗಳು : ಭಾರ್ತಿ ಏರ್ ಟೆಲ್, ಬಿಪಿಸಿಎಲ್, ಎಚ್‌ಪಿಸಿಎಲ್, ಏಶ್ಯನ್ ಪೇಂಟ್ಸ್, ಬಜಾಜ್ ಫಿನ್ ಸರ್ವ್.