ಮುಂಬಯಿ : ಏಶ್ಯನ್ ಶೇರು ಪೇಟೆಗಳಲ್ಲಿ ಸ್ಥಿರತೆಯ ಪ್ರವೃತ್ತಿ ತೋರಿ ಬಂದಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 218 ಅಂಕಗಳ ಜಿಗಿತವನ್ನು ದಾಖಲಿಸಿತು. ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 9,800 ಅಂಕಗಳ ಮಟ್ಟವನ್ನು ದಾಟಿ ಮುನ್ನುಗ್ಗಿತು.
ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್ ಒಟ್ಟು 536.61 ಅಂಕಗಳ ನಷ್ಟಕ್ಕೆ ಗುರಿಯಾಗಿ ಹೂಡಿಕೆದಾರರಲ್ಲಿ ತಲ್ಲಣ ಸೃಷ್ಟಿಸಿತ್ತು.
ಬೆಳಗ್ಗೆ 10.38ರ ಹೊತ್ತಿಗೆ ಸೆನ್ಸೆಕ್ಸ್ 27.86 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 31,285.71 ಅಂಕಗಳ ಮಟ್ಟದಲ್ಲೂ, ನಿಫ್ಟಿ 10.20 ಅಂಕಗಳ ಏರಿಕೆಯನ್ನು ಕಾಯ್ದುಕೊಂಡು 9,754.55 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇನ್‌ಫೋಸಿಸ್, ಎಸ್ ಬ್ಯಾಂಕ್, ಎಕ್ಸಿಸ್ ಬ್ಯಾಂಕ್, ಹಿಂಡಾಲ್ಕೊ, ಲೂಪಿನ್ ಶೇರುಗಳು ಇಂದು ಆರಂಭಿಕ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ಗೇನರ್‌ಗಳು : ಟೆಕ್ ಮಹೀಂದ್ರ, ಲೂಪಿನ್, ಹಿಂಡಾಲ್ಕೋ, ಬಿಪಿಸಿಎಲ್, ಸನ್ ಫಾರ್ಮಾ. ಟಾಪ್ ಲೂಸರ್‌ಗಳು : ಬ್ಯಾಂಕ್ ಆಫ್ ಬರೋಡ, ಎಸ್ ಬ್ಯಾಂಕ್, ಹೀರೋ ಮೋಟೋ ಕಾರ್ಪ್, ಎಸಿಸಿ, ಪವರ್‌ಗ್ರಿಡ್.