ಮುಂಬಯಿ : ಅಮೆರಿಕದ ವಾಲ್ ಸ್ಟ್ರೀಟ್‌ನಲ್ಲಿ ಚೇತರಿಕೆ ಕಂಡುಬಂದಿರುವುದನ್ನು ಅನುಸಿರಿಸಿ ಏಶ್ಯನ್ ಶೇರು ಪೇಟೆಗಳೂ ದೃಢತೆಯನ್ನು ತೋರ್ಪಡಿಸಿರುವ ಹಿನ್ನೆಲೆಯಲ್ಲಿ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 470.39 ಅಂಕಗಳ ಭರ್ಜರಿ ಜಿಗಿತವನ್ನು ಸಾಧಿಸಿ 34,666.33 ಅಂಕಗಳ ಮಟ್ಟಕ್ಕೆ ಏರಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 115.75 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 10,614.00 ಅಂಕಗಳ ಮಟ್ಟದಲ್ಲಿ ಆರಂಭಿಸಿತು.
ಜಾಗತಿಕ ಶೇರು ಮಾರುಕಟ್ಟೆಯಲ್ಲಿನ ತಲ್ಲಣವನ್ನು ಅನುಸರಿಸಿ ಮುಂಬಯಿ ಶೇರು ಪೇಟೆ ಕಳೆದ ಆರು ದಿನಗಳಿಂದ ನಷ್ಟದ ಹಾದಿಯಲ್ಲಿ ಸಾಗಿ ಬಂದು ಒಟ್ಟು 2,087.31 ಅಂಕಗಳನ್ನು ಕಳೆದು ಕೊಂಡಿತು.
ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ್ 154.35 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 34,350.29 ಅಂಕಗಳ ಮಟ್ಟದಲ್ಲೂ ನಿಫ್ಟಿ 62.40 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 10,560.70 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಏಶ್ಯನ್ ಶೇರು ಪೇಟೆಗಳ ಪೈಕಿ ಜಪಾನಿನ ನಿಕ್ಕಿ ಶೇ.1.59, ಸ್ಟ್ರೇಟ್ ಟೈಮ್ಸ್ ಸೂಚ್ಯಂಕ ಶೇ.0.37 ಮತ್ತು ಹ್ಯಾಂಗ್ ಸೆಂಗ್ ಸೂಚ್ಯಂಕ ಶೇ.1.26ರ ಮುನ್ನಡೆಯನ್ನು ಇಂದು ಬೆಳಗ್ಗಿನ ವಹಿವಾಟಿನಲ್ಲಿ ಪಡೆದುಕೊಂಡಿದ್ದವು.
ಕೋಟಕ್ ಮಹೀಂದ್ರ, ಎಚ್ ಡಿ ಎಫ್ ಸಿ, ಟಾಟಾ ಮೋಟರ್, ರಿಲಯನ್ಸ್, ಲೂಪಿನ್ ಶೇರುಗಳು ಇಂದು ಹೆಚ್ಚು ಕ್ರಿಯಾಶೀಲವಾಗಿದ್ದವು.