ಮುಂಬಯಿ : ಏಶ್ಯನ್ ಶೇರು ಪೇಟೆಗಳಲ್ಲಿ ಉತ್ತಮ ತೇಜಿ ಕಂಡು ಬಂದಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 250ಕ್ಕೂ ಅಧಿಕ ಅಂಕಗಳ ಮುನ್ನಡೆಯನ್ನು ದಾಖಲಿಸಿತು.
ಅಮೆರಿಕ – ಚೀನ ವಾಣಿಜ್ಯ ಬಿಕ್ಕಟ್ಟು ಶಮನ ಮಾತುಕತೆ ಮತ್ತು ಅಮೆರಿಕದ ಫೆಡ್ ರೇಟ್ ನೀತಿಯ ಬಗ್ಗೆ ಶೇರು ಮಾರುಕಟ್ಟೆ ಆಶಾವಾದ ಹೊಂದಿರುವ ನೆಲೆಯಲ್ಲಿ ಇ,ದು ಮೆಟಲ್, ಐಟಿ ಮತ್ತು ಬ್ಯಾಂಕಿಂಗ್ ರಂಗದ ಶೇರುಗಳು ಉತ್ತಮ ಖರೀದಿಯನ್ನು ಕಂಡವು.
ಹಾಗಿದ್ದರೂ ಬೆಳಗ್ಗೆ 11.15ರ ಸುಮಾರಿಗೆ ಸೆನ್ಸೆಕ್ಸ್ 29.84 ಅಂಕಗಳ ನಷ್ಟಕ್ಕೆ ಗುರಿಯಾಗಿ 35,562.66 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 18.70 ಅಂಕಗಳ ನಷ್ಟದೊಂದಿಗೆ 10,633.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಎಕ್ಸಿಸ್ ಬ್ಯಾಂಕ್, ಎಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಬಜಾಜ್ ಫಿನಾನ್ಸ್, ಎಚ್‌ಸಿಎಲ್ ಟೆಕ್ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಡಾಲರ್ ಎದುರು ರೂಪಾಯಿ ಇಂದು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 25 ಪೈಸೆಯ ಕುಸಿತಕ್ಕೆ ಗುರಿಯಾಗಿ 71.36 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.