ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 123 ಅಂಕಗಳ ಜಿಗಿತವನ್ನು ದಾಖಲಿಸಿತು. ಆ ಮೂಲಕ ಕಳೆದ ಮೂರು ದಿನಗಳಿಂದ ನಿರಂತರ ನಷ್ಟದ ಹಾದಿಯಲ್ಲಿ ಸಾಗಿ ಬಂದಿದ್ದ ಸೆನ್ಸೆಕ್ಸ್ ಕೊನೆಗೂ ಲಾಭದ ಹಾದಿಗೆ ಹೊರಳಿಕೊಂಡಿತು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಮೂಲ ಸೌಕರ್ಯ, ಕ್ಯಾಪಿಟಲ್ ಗೂಡ್ಸ್, ಪಿಎಸ್‌ಯು, ರಿಯಲ್ಟಿ ಮತ್ತು ಮೆಟಲ್ ರಂಗದ ಶೇರುಗಳು ಉತ್ತಮ ಖರೀದಿಯನ್ನು ಕಂಡವು.
ಬೆಳಗ್ಗೆ 10.50 ರ ಹೊತ್ತಿಗೆ ಸೆನ್ಸೆಕ್ಸ್ 36.23 ಅಂಕಗಳ ಮುನ್ನಡೆಯನ್ನು ಕಾಯ್ದಕೊಂಡು 33,829.61 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10.50 ಅಂಕಗಳ ಮುನ್ನಡೆಯೊಂದಿಗೆ 10,453.70 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಹಿಂಡಾಲ್ಕೊ, ಟಾಟಾ ಮೋಟರ್ , ಟಾಟಾ ಸ್ಟೀಲ್, ಮಾರುತಿ ಸುಜುಕಿ, ಲೂಪಿನ್ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಇಂದಿನ ಆರಂಭಿಕ ವಹಿವಾಟಿನಲ್ಲಿ 2,578 ಶೇರುಗಳು ವಹಿವಾಟಿಗೆ ಒಳಪಟ್ಟವು; 1,690 ಶೇರುಗಳು ಮುನ್ನಡೆ ಸಾಧಿಸಿದವು; 797 ಶೇರುಗಳು ಹಿನ್ನಡೆಗೆ ಗುರಿಯಾದವು; 91 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.