ಮುಂಬಯಿ : ನಿರಂತರ ಐದನೇ ದಿನ ತನ್ನ ಏರುಗತಿಯನ್ನು ಕಾಯ್ದುಕೊಂಡಿರುವ ಮುಂಬಯಿ ಶೇರು ಪೇಟೆ ಇಂದು ಸೋಮವಾರ 307.14 ಅಂಕಗಳ ಉತ್ತಮ ಏರಿಕೆ ದಾಖಲಿಸಿ ದಿನದ ವಹಿವಾಟನ್ನು 36,270.07 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 82.90 ಅಂಕಗಳ ಮುನ್ನಡೆಯನ್ನು ದಾಖಲಿಸಿ ದಿನದ ವಹಿವಾಟನ್ನು 10,888.35 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಮುಂಬಯಿ ಶೇರು ಪೇಟೆ ಕಳೆದ ನಾಲ್ಕು ದಿನಗಳ ವಹಿವಾಟಿನಲ್ಲಿ ಒಟ್ಟು 1,003.21 ಅಂಕಗಳನ್ನು ಸಂಪಾದಿಸಿದೆ.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,767 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,392 ಕಂಪೆನಿಗಳು ಮುನ್ನಡೆ ಸಾಧಿಸಿದವು; 1,186 ಕಂಪೆನಿಗಳು ಹಿನ್ನಡೆಗೆ ಗುರಿಯಾದವು; 189 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ.
ಡಾಲರ್ ಎದುರು ರೂಪಾಯಿ ಇಂದಿನ ವಹಿವಾಟಿನಲ್ಲಿ 16 ಪೈಸೆಗಳ ಏರಿಕೆಯನ್ನು ದಾಖಲಿಸಿ 71.74 ರೂ. ಮಟ್ಟ ಏರಿತು.