Advertisement

ಮುಂಬಯಿ ಶೇರು 157 ಅಂಕ ಜಿಗಿತ, ನಿಫ್ಟಿ 10,400ರ ಮಟ್ಟಕ್ಕೆ

10:50 AM Feb 20, 2018 | |

ಮುಂಬಯಿ : ಹೂಡಿಕೆದಾರರು ಮತ್ತು ವಹಿವಾಟುದಾರರು ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ ಮೆಟಲ್‌, ಕ್ಯಾಪಿಟಲ್‌ ಗೂಡ್ಸ್‌, ಟೆಕ್‌ ಮತ್ತು ಐಟಿ ಶೇರುಗಳ ಖರೀದಿಯಲ್ಲಿ ತೊಡಗಿಕೊಂಡ ಕಾರಣ ಮುಂಬಯ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ 157 ಅಂಕಗಳ ಜಿಗಿತವನ್ನು ದಾಖಲಿಸಿತು. ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10,400 ಅಂಕಗಳ ಮಟ್ಟವನ್ನು ಪುನರ್‌ ಸಂಪಾದಿಸಿತು. 

Advertisement

ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್‌ 113,77 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 33,883.43 ಅಂಕಗಳ ಮಟ್ಟದಲ್ಲೂ , ನಿಫ್ಟಿ 25.10 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 10,403.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಟಾಟಾ ಸ್ಟೀಲ್‌, ಎಸ್‌ಬಿಐ, ಎಚ್‌ಡಿಎಫ್ಸಿ, ಟಿಸಿಎಸ್‌, ಇನ್‌ಫೋಸಿಸ್‌ ಶೇರುಗಳು ಬೆಳಗ್ಗಿನ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು. 

ವೇದಾಂತ, ಟಿಸಿಎಸ್‌, ಇಂಡಸ್‌ಇಂಡ್‌ ಬ್ಯಾಂಕ್‌, ಟಾಟಾ ಸ್ಟೀಲ್‌, ಹೀರೋ ಮೋಟೋಕಾರ್ಪ್‌ ಶೇರುಗಳು ಟಾಪ್‌ ಗೇನರ್‌ ಎನಿಸಿಕೊಂಡವು; ಭಾರ್ತಿ ಇನ್‌ಫ್ರಾಟೆಲ್‌, ಅರಬಿಂದೋ ಫಾರ್ಮಾ, ಸಿಪ್ಲಾ, ಎಸ್‌ಬಿಐ, ರಿಲಯನ್ಸ್‌ ಶೇರುಗಳು ಟಾಪ್‌ ಲೂಸರ್‌ ಎನಿಸಿಕೊಂಡು ಹಿನ್ನಡೆಗೆ ಗುರಿಯಾದವು. 

Advertisement

Udayavani is now on Telegram. Click here to join our channel and stay updated with the latest news.

Next