ಮುಂಬಯಿ : ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಬಡ್ಡಿದರಗಳನ್ನು ಯಥಾವತ್ತಾಗಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 168 ಅಂಕಗಳ ಮುನ್ನಡೆಯನ್ನು ಸಾಧಿಸಿತು.
ವಹಿವಾಟುದಾರರು ಮತ್ತು ಹೂಡಿಕೆದಾರರು ಬ್ಯಾಂಕಿಂಗ್ ಮತ್ತು ಕ್ಯಾಪಿಟಲ್ ಗೂಡ್ಸ್ ಶೇರುಗಳನ್ನು ಖರೀದಿಗಾಗಿ ಆಯ್ಕೆ ಮಾಡಿಕೊಂಡರು. ರಿಯಲ್ಟಿ, ಐಟಿ, ಹೆಲ್ತ್ ಕೇರ್ ಮತ್ತು ಬ್ಯಾಂಕ್ ಶೇರುಗಳು ಇಂದಿನ ಆರಂಭಿಕ ವಹಿವಾಟಿನಲ್ಲಿ ಉತ್ತಮ ಮುನ್ನಡೆ ಸಾಧಿಸಿದವು.
ಕಳೆದ ಏಳು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್ 2,200.54 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು.
ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ್ 91.00 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 34,401.69 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 91.00 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 10,567.70 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಸನ್ ಫಾರ್ಮಾ, ಸಿಪ್ಲಾ, ವೇದಾಂತ, ಟಿಸಿಎಸ್, ಮಾರುತಿ ಸುಜುಕಿ ಶೇರುಗಳು ಇಂದು ಅತ್ಯಂತ ಕ್ರಿಯಾಶೀಲವಾಗಿದ್ದವು.