ಮುಂಬಯಿ : ವಿಶ್ವ ಜಾಗತಿಕ ಮಾರುಕಟ್ಟೆಗಳಲ್ಲಿನ ದುರ್ಬಲ ಪ್ರವೃತ್ತಿ ಕಂಡು ಬಂದಿರುವುದನ್ನು ಅನುಸರಿಸಿ ಹೂಡಿಕೆದಾರರು ಮತ್ತು ವಹಿವಾಟುದಾರರು ಲಾಭ ನಗದಿಕರಣಕ್ಕೆ ಮುಂದಾದ ಪ್ರಯುಕ್ತ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 162 ಅಂಕಗಳ ನಷ್ಟಕ್ಕೆ ಗುರಿಯಾಯಿತು.
ಡಾಲರ್ ಎಂದು 9 ಪೈಸೆಯಷ್ಟು ಇಂದಿನ ಆರಂಭಿಕ ವಹಿವಾಟಿನಲ್ಲಿ ರೂಪಾಯಿ ದುರ್ಬಲವಾದದ್ದು ಕೂಡ ಶೇರು ಪೇಟೆ ನಿಸ್ತೇಜವಾಗಲು ಕಾರಣವಾಯಿತು. ಐಟಿ ಟೆಕ್ ಹೆಲ್ತ್ ಕೇರ್, ಮೆಟಲ್, ಕ್ಯಾಪಿಟಲ್ ಗೂಡ್ಸ್ ಮತ್ತು ಬ್ಯಾಂಕಿಂಗ್ ರಂಗದ ಶೇರುಗಳು ತೀವ್ರ ಮಾರಾಟ ಒತ್ತಡಕ್ಕೆ ಗುರಿಯಾದವು.
ನಿನ್ನೆಯ ವಹಿವಾಟಿನಲ್ಲಿ ಸೆನ್ಸೆಕ್ಸ್ 232.81 ಅಂಕಗಳ ಭರ್ಜರಿ ಮುನ್ನಡೆಯನ್ನು ಸಾಧಿಸಿ ಹೊಸ ದಾಖಲೆಯ ಎತ್ತರವಾಗಿ 36,283.25 ಅಂಕಗಳ ಮಟ್ಟವನ್ನು ತಲುಪಿತ್ತು.
ಇಂದು ಬೆಳಗ್ಗೆ 11.00 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್ 214.83 ಅಂಕಗಳ ನಷ್ಟದೊಂದಿಗೆ 36,068.42 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರ ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 77.60 ಅಂಕಗಳ ನಷ್ಟದೊಂದಿಗೆ 11,052.80 ಅಂಕಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಎಚ್‌ಡಿಎಫ್ಸಿ, ಎಸ್‌ಬಿಐ, ಮಾರುತಿ ಸುಜುಕಿ, ಟೆಕ್ ಮಹೀಂದ್ರ, ಐಸಿಐಸಿಐ ಶೇರುಗಳು ಇಂದಿನ ಅರಂಭಿಕ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು.