ಮುಂಬಯಿ : ರಿಯಲ್ಟಿ ಶೇರುಗಳ ಖರೀದಿಯಲ್ಲಿ ಹೂಡಿಕೆದಾರರು ಹಾಗೂ ವಹಿವಾಟುದಾರರು ಆಸಕ್ತಿ ತೋರಿದ ಫಲವಾಗಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 149 ಅಂಕಗಳ ಜಿಗಿತವನ್ನು ಕಂಡಿತು.
ಇದೇ ರೀತಿ ಉತ್ತಮ ಮುನ್ನಡೆ ಕಂಡ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 9,800 ಅಂಕಗಳ ಮನೋ ಪ್ರಾಬಲ್ಯದ ಮಟ್ಟವನ್ನು ಪುನರ್ ಸಂಪಾದಿಸಿತು.
ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ್ 153.02 ಅಂಕಗಳ ಮುನ್ನಡೆಯೊಂದಿಗೆ 31,444.87 ಅಂಕಗಳ ಮಟ್ಟದಲ್ಲೂ, ನಿಫ್ಟಿ 38.05 ಅಂಕಗಳ ಮುನ್ನಡೆಯೊಂದಿಗೆ 9,803.60 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಏಶ್ಯನ್ ಶೇರು ಮಾರುಕಟ್ಟೆಗಳ ಪೈಕಿ ಜಪಾನಿನ ನಿಕ್ಕಿ ಶೇ.0.37, ಸ್ಟ್ರೇಟ್ ಟೈಮ್ಸ್ ಸೂಚ್ಯಂಕ ಶೇ.0.08 ಮತ್ತು ಹಾಂಕಾಂಗ್ ನ ಹ್ಯಾಂಗ್ ಸೆಂಗ್ ಶೇ. 0.91ರ ಮುನ್ನಡೆಯನ್ನು ದಾಖಲಿಸಿದವು.
ಮುಂಬಯಿ ಶೇರು ಪೇಟೆಯಲ್ಲಿ ಇಂದಿನ ಆರಂಭಿಕ ವಹಿವಾಟಿನಲ್ಲಿ ಇನ್‌ಫೋಸಿಸ್, ಎಸ್ ಬ್ಯಾಂಕ್, ಎಸ್‌ಬಿಐ, ಎಚ್‌ಡಿಎಫ್ಸಿ, ಡಾ. ರೆಡ್ಡಿ ಶೇರುಗಳು ಅತ್ಯಂತ ಹೆಚ್ಚು ಕ್ರಿಯಾಶೀಲವಾಗಿದ್ದವು.