ಮುಂಬಯಿ : ದೇಶೀಯ ಸಾಂಸ್ಥಿಕ ಹೂಡಿಕೆದಾರರು ಮತ್ತು ವಹಿವಾಟುದಾರರು ಐಟಿ, ಬ್ಯಾಂಕಿಂಗ್ ಮತ್ತು ಎಫ್ಎಂಸಿಜಿ ಶೇರುಗಳ ಖರೀದಿಯಲ್ಲಿ ತೊಡಗಿಕೊಂಡ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 196 ಅಂಕಗಳ ಜಿಗಿತವನ್ನು ದಾಖಲಿಸಿತು.
ವಾಲ್ ಸ್ಟ್ರೀಟ್ ನಲ್ಲಿ ಧನಾತ್ಮಕ ಸನ್ನಿವೇಶ ನೆಲೆಗೊಂಡಿರುವುದನ್ನು ಅನುಸರಿಸಿ ಏಶ್ಯನ್ ಶೇರು ಪೇಟೆಗಳಲ್ಲಿ ಉತ್ಸಾಹ ಕುದುರಿರುವುದನ್ನು ಅನುಲಕ್ಷಿಸಿ ಮುಂಬಯಿ ಶೇರು ಪೇಟೆಯಲ್ಲಿಂದು ತೇಜ್ಯಿ ವಾತಾವಾರಣ ಕಂಡು ಬಂತು.
ನಿನ್ನೆಯ ದಿನ ಸೆನ್ಸೆಕ್ಸ್ 141.52 ಅಂಕಗಳ ಮುನ್ನಡೆಯನ್ನು ಕಂಡಿತ್ತು.
ಇಂದು ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್ 38.31 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 34,335.78 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 13.70 ಅಂಕಗಳ ಮುನ್ನಡೆಯನ್ನು ಕಾಯುದಕೊಂಡು 10,559.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಎಸ್‌ಬಿಐ, ಇನ್‌ಫೋಸಿಸ್, ಟಿಸಿಎಸ್, ಎಸ್ ಬ್ಯಾಂಕ್, ಎಚ್ ಡಿ ಎಫ್ ಸಿ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ಗೇನರ್‌ಗಳು : ಅಂಬುಜಾ ಸಿಮೆಂಟ್ಸ್, ಎಚ್ ಸಿ ಎಲ್ ಟೆಕ್, ಟಿಸಿಎಸ್, ಅಲ್‌ಟ್ರಾ ಟೆಕ್ ಸಿಮೆಂಟ್, ಡಾ. ರೆಡ್ಡೀಸ್ ಲ್ಯಾಬ್.
ಟಾಪ್ ಲೂಸರ್‌ಗಳು : ಈಶರ್ ಮೋಟರ್, ಎಸ್ ಬ್ಯಾಂಕ್, ಟೆಕ್ ಮಹೀಂದ್ರ , ಎಕ್ಸಿಸ್ ಬ್ಯಾಂಕ್, ಎಸ್‌ಬಿಐ.