ಮುಂಬಯಿ : ಏಶ್ಯನ್ ಶೇರು ಪೇಟೆಯಲ್ಲಿ ಕಂಡು ಬಂದಿರುವ ಧನಾತ್ಮಕತೆಯನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 224 ಅಂಕಗಳ ಜಿಗತವನ್ನು ಸಾಧಿಸಿತು.
ಮೆಟಲ್, ಬ್ಯಾಂಕಿಂಗ್, ಆಟೋ ಮತ್ತು ಇಂಧನ ವಲಯದ ಶೇರುಗಳ ಉತ್ತಮ ಖರೀದಿಯನ್ನು ಕಂಡವು.
ಬೆಳಗ್ಗೆ 11.10ರ ಹೊತ್ತಿಗೆ ಸೆನ್ಸೆಕ್ಸ್ 281.12 ಅಂಕಗಳ ಮುನ್ನಡೆಯೊಂದಿಗೆ 36,244.05 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 63.60 ಅಂಕಗಳ ಮುನ್ನಡೆಯೊಂದಿಗೆ 10,869.10 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 16 ಪೈಸೆಗಳ ಏರಿಕೆಯನ್ನು ದಾಖಲಿಸಿ 71.74 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ಎಸ್ ಬ್ಯಾಂಕ್, ವೇದಾಂತ, ಐಸಿಐಸಿಐ ಬ್ಯಾಂಕ್, ಮಾರುತಿ ಸುಜುಕಿ, ಟಾಟಾ ಮೋಟರ್ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.