Advertisement

ಜಾಗತಿಕ ಶೇರು ಪೇಟೆಗಳಲ್ಲಿ ಧನಾತ್ಮಕತೆ: ಸೆನ್ಸೆಕ್ಸ್‌ 105 ಅಂಕ ಜಂಪ್‌

05:47 AM Jan 17, 2019 | udayavani editorial |

ಮುಂಬಯಿ : ಜಾಗತಿಕ ಶೇರು ಪೇಟೆಗಳಲ್ಲಿ ಧನಾತ್ಮಕತೆ ತೋರಿ ಬಂದಿರುವ ಹಿನ್ನೆಲೆಯಲ್ಲಿ ದೇಶೀಯ ಹೂಡಿಕೆದಾರ ಸಂಸ್ಥೆಗಳು ಮುಂಚೂಣಿ ಶೇರುಗಳ  ವ್ಯಾಪಕ ಖರೀದಿಯಲ್ಲಿ ತೊಡಗಿಕೊಂಡ ಕಾರಣ ಮುಂಬಯಿ ಶೇರು ಪೇಟೆ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 100ಕ್ಕೂ ಅಧಿಕ ಅಂಕಗಳ ಏರಿಕೆಯನ್ನು ಸಾಧಿಸಿತು.

Advertisement

ಬೆಳಗ್ಗೆ 11.15ರ ಸುಮಾರಿಗೆ ಸೆನ್ಸೆಕ್ಸ್‌  104.93 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡ 36,426.22 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 27.60 ಅಂಕಗಳ ಮುನ್ನಡೆಯೊಂದಿಗೆ 10,917.90 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್‌ ಎದುರು ರೂಪಾಯಿ 8 ಪೈಸೆಗಳ ಏರಿಕೆಯನ್ನು ದಾಖಲಿಸಿ 71.15 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

Advertisement

Udayavani is now on Telegram. Click here to join our channel and stay updated with the latest news.

Next