Advertisement

ಮುಂಬಯಿ ಶೇರು 200 ಅಂಕ ಮುನ್ನಡೆ, 10,200 ಮುಟ್ಟಿದ ನಿಫ್ಟಿ

10:53 AM Mar 27, 2018 | |

ಮುಂಬಯಿ :  ವಾಣಿಜ್ಯ ಸಮರ ಸ್ಫೋಟಗೊಳ್ಳದಂತೆ ಅಮೆರಿಕ ಮತ್ತು ಚೀನ ನಡುವೆ ಸಂಧಾನ ಮಾತುಕತೆಗಳು ನಡೆಯತ್ತಿರುವುದಾಗಿ ವರದಿಯಾಗಿರುವ ಹಿನ್ನೆಲೆಯಲ್ಲಿ  ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ಸ್ಥಿರತೆ ತೋರಿ ಬಂದಿರುವುದನ್ನು ಅನುಸರಿಸಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 200 ಅಂಕಗಳ ಮುನ್ನಡೆಯನ್ನು ದಾಖಲಿಸಿತು.

Advertisement

ನಿನ್ನೆ ಸೋಮವಾರದ ವಹಿವಾಟಿನಲ್ಲಿ 469.87 ಅಂಕಗಳ ಮುನ್ನಡೆ ಸಾಧಿಸಿದ್ದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಇಂದು ಮಂಗಳವಾರದ ವಹಿವಾಟಿನಲ್ಲಿ ಬೆಳಗ್ಗೆ 10.45ರ ಹೊತ್ತಿಗೆ 93.44 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 33,159.85 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 35.20 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 10,165.90 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಐಸಿಐಸಿಐ ಬ್ಯಾಂಕ್‌, ಟಾಟಾ ಸ್ಟೀಲ್‌, ಎಸ್‌ಬಿಐ, ಎಸ್‌ ಬ್ಯಾಂಕ್‌, ಎಚ್‌ ಡಿ ಎಫ್ ಸಿ ಅತ್ಯಂತ ಕ್ರಿಯಾಶೀಲವಾಗಿದ್ದವು. ಎಚ್‌ಪಿಸಿಎಲ್‌, ಬಜಾಜ್‌ ಫೈನಾನ್ಸ, ಎಕ್ಸಿಸ್‌ ಬ್ಯಾಂಕ್‌, ಟಾಟಾ ಸ್ಟೀಲ್‌, ಐಸಿಐಸಿಐ ಬ್ಯಾಂಕ್‌ ಶೇರುಗಳು ಟಾಪ್‌ ಗೇನರ್‌ ಎನಿಸಿಕೊಂಡವು. ಇದೇ ವೇಳೆ ಭಾರ್ತಿ ಇನ್‌ಫ್ರಾಟೆಲ್‌,… ಭಾರ್ತಿ ಏರ್‌ಟೆಲ್‌, ಗೇಲ್‌, ಹೀರೋ ಮೋಟೋ ಕಾರ್ಪ್‌, ಬಜಾಜ್‌ ಆಟೋ ಶೇರುಗಳು ಹಿನ್ನಡೆಗೆ ಗುರಿಯಾಗಿ ಟಾಪ್‌ ಲೂಸರ್‌ ಎನಿಸಿಕೊಂಡವು. 

ಡಾಲರ್‌ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 9 ಪೈಸೆಯಷ್ಟು ಚೇತರಿಸಿ ನಾಲ್ಕು ವಾರಗಳ ಗರಿಷ್ಠವಾಗಿ 64.78 ರೂ. ಮಟ್ಟದಲ್ಲಿ ದಾಖಲಾಯಿತು. 

Advertisement

Udayavani is now on Telegram. Click here to join our channel and stay updated with the latest news.

Next