Advertisement

200ಕ್ಕೂ ಅಧಿಕ ಅಂಕಗಳ ಜಿಗಿತ ಸಾಧಿಸಿದ ಮುಂಬಯಿ ಶೇರು

11:17 AM Jul 09, 2018 | udayavani editorial |

ಮುಂಬಯಿ: ಡಾಲರ್‌ ಎದುರು ರೂಪಾಯಿ ಚೇತರಿಕೆ, ಏಶ್ಯನ್‌ ಶೇರು ಮಾರುಕಟ್ಟೆಗಳಲ್ಲಿನ ಚೇತೋಹಾರಿ ಸನ್ನಿವೇಶ, ಮುಂಚೂಣಿ ರಂಗದ ಶೇರುಗಳ ಭರಾಟೆಯ ಖರೀದಿ ಪರಿಣಾಮವಾಗಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 200ಕ್ಕೂ ಅಧಿಕ ಅಂಕಗಳ ಜಿಗಿತವನ್ನು ಸಾಧಿಸಿತು. 

Advertisement

ಬೆಳಗ್ಗೆ 11.15ರ ಹೊತ್ತಿಗೆ ಸೆನ್ಸೆಕ್ಸ್‌ 140.56 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 35,798.42 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 43.50 ಅಂಕಗಳ ಮುನ್ನಡೆಯೊಂದಿಗೆ 10,816.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಟಾಟಾ ಸ್ಟೀಲ್‌, ವೇದಾಂತ, ಎಸ್‌ ಬ್ಯಾಂಕ್‌, ಟಾಟಾ ಮೋಟರ್‌, ಬಜಾಜ್‌ ಆಟೋ, ಎಕ್ಸಿಸ್‌ ಬ್ಯಾಂಕ್‌, ಪವರ್‌ ಗ್ರಿಡ್‌, ಕೋಲ್‌ ಇಂಡಿಯಾ, ಭಾರ್ತಿ ಏರ್‌ಟೆಲ್‌, ಇನ್‌ಫೋಸಿಸ್‌ ಶೇರುಗಳು ಇಂದು ಬೆಳಗ್ಗಿನ ವಹಿವಾಟಿನಲ್ಲಿ ಶೇ.1.85ರ ಏರಿಕೆಯನ್ನು ಕಂಡವು. 

ಡಾಲರ್‌ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 30 ಪೈಸೆ ಚೇತರಿಕೆಯನ್ನು ಕಂಡು 68.57 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

Advertisement

Udayavani is now on Telegram. Click here to join our channel and stay updated with the latest news.

Next